ADVERTISEMENT

ಮಾನವ ಹಕ್ಕುಗಳ ಧ್ವನಿ ಎತ್ತಿದ ಫುಲೆ, ಅಂಬೇಡ್ಕರ್: ನಿತೇಶಕುಮಾರ ಬಿರಾದಾರ

ಮಾನವ ಹಕ್ಕುಗಳ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2021, 12:24 IST
Last Updated 11 ಡಿಸೆಂಬರ್ 2021, 12:24 IST
ಬೀದರ್‌ನ ಗ್ಲೊಬಲ್ ಸೈನಿಕ ಅಕಾಡೆಮಿಯಲ್ಲಿ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅಕಾಡೆಮಿ ಅಧ್ಯಕ್ಷ ನಿವೃತ್ತ ಕರ್ನಲ್ ಶರಣಪ್ಪ ಸಿಕೇನಪುರ, ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಅಧ್ಯಕ್ಷ ಡಾ. ನಿತೇಶಕುಮಾರ ಬಿರಾದಾರ, ಕಾಮಶೆಟ್ಟಿ ಚಿಕ್ಕಬಸೆ, ಫರ್ದಿನ್ ಇದ್ದರು
ಬೀದರ್‌ನ ಗ್ಲೊಬಲ್ ಸೈನಿಕ ಅಕಾಡೆಮಿಯಲ್ಲಿ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅಕಾಡೆಮಿ ಅಧ್ಯಕ್ಷ ನಿವೃತ್ತ ಕರ್ನಲ್ ಶರಣಪ್ಪ ಸಿಕೇನಪುರ, ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಅಧ್ಯಕ್ಷ ಡಾ. ನಿತೇಶಕುಮಾರ ಬಿರಾದಾರ, ಕಾಮಶೆಟ್ಟಿ ಚಿಕ್ಕಬಸೆ, ಫರ್ದಿನ್ ಇದ್ದರು   

ಬೀದರ್: ದೇಶದಲ್ಲಿ ಮಹಾತ್ಮ ಜ್ಯೋತಿಬಾ ಫುಲೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರು ಮಾನವ ಹಕ್ಕುಗಳ ಪರ ಧ್ವನಿ ಎತ್ತಿದ್ದರು ಎಂದು ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯ ಅಧ್ಯಕ್ಷ ಡಾ. ನಿತೇಶಕುಮಾರ ಬಿರಾದಾರ ಹೇಳಿದರು.

ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯು ಗ್ಲೊಬಲ್ ಸೈನಿಕ ಅಕಾಡೆಮಿ ಸಹಯೋಗದಲ್ಲಿ ಇಲ್ಲಿಯ ಬೇನಕನಳ್ಳಿ ರಸ್ತೆಯಲ್ಲಿ ಇರುವ ಗ್ಲೊಬಲ್ ಸೈನಿಕ ಅಕಾಡೆಮಿಯಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾನವ ಹಕ್ಕುಗಳಿಗಾಗಿ ವಿಶ್ವದಲ್ಲಿ ಅನೇಕ ಮಹಾ ಪುರುಷರು ಹೋರಾಟ ನಡೆಸಿದ್ದಾರೆ ಎಂದು ತಿಳಿಸಿದರು.

ADVERTISEMENT

ಭೂಮಿ ಮೇಲೆ ಜನಿಸುವ ಪ್ರತಿ ವ್ಯಕ್ತಿಗೂ ತನ್ನದೇ ಆದ ಹಕ್ಕುಗಳು ಇವೆ. ಮಾನವ ಹಕ್ಕುಗಳಿಗೆ ಯಾರೂ ಚ್ಯುತಿ ತರುವಂತಿಲ್ಲ. ದೇಶದ ಸಂವಿಧಾನದಲ್ಲೂ ನಾಗರಿಕರಿಗೆ ಮೂಲಭೂತ ಹಕ್ಕುಗಳನ್ನು ಕೊಡಲಾಗಿದೆ ಎಂದು ತಿಳಿಸಿದರು.

1948 ರಲ್ಲಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆ ಅಂಗೀಕರಿಸಲಾಗಿತ್ತು. ಅಂದಿನ ದಿನದ ನೆನಪಿಗಾಗಿ ಪ್ರತಿ ವರ್ಷ ವಿಶ್ವ ಮಾನವ ಹಕ್ಕುಗಳ ದಿನ ಆಚರಿಸುತ್ತ ಬರಲಾಗುತ್ತಿದೆ ಎಂದು ಹೇಳಿದರು.

ಗ್ಲೊಬಲ್ ಸೈನಿಕ ಅಕಾಡೆಮಿಯ ಅಧ್ಯಕ್ಷ ನಿವೃತ್ತ ಕರ್ನಲ್ ಶರಣಪ್ಪ ಸಿಕೇನಪುರ ಮಾತನಾಡಿ, ಯುದ್ಧ ಕೈದಿಗಳಿಗೂ ಮಾನವ ಹಕ್ಕುಗಳು ಅನ್ವಯಿಸುತ್ತವೆ. ಮೊದಲ ಹಾಗೂ ಎರಡನೇ ವಿಶ್ವ ಯುದ್ಧದ ಸಂದರ್ಭದಲ್ಲಿ ಸೆರೆ ಸಿಕ್ಕಿದ್ದ ಕೈದಿಗಳ ಜತೆ ಮನುಷ್ಯರಂತೆ ನಡೆದುಕೊಳ್ಳಲು ತೀರ್ಮಾನಿಸಲಾಗಿತ್ತು ಎಂದು ತಿಳಿಸಿದರು.

ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಖಜಾಂಚಿ ಕಾಮಶೆಟ್ಟಿ ಚಿಕ್ಕಬಸೆ, ರೊಟೇರಿಯನ್ ಫರ್ದಿನ್, ಆನಂದ ಕಂದಗೂಳೆ, ಅಕಾಡೆಮಿಯ ಸಿಬ್ಬಂದಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.