ADVERTISEMENT

ದೈಹಿಕ ಸದೃಢತೆ ಕ್ರೀಡೆ ಅಗತ್ಯ: ಡಿ.ಎಲ್‌.ನಾಗೇಶ ಹೇಳಿಕೆ

ಜಿಲ್ಲಾ ಪೊಲೀಸ್‌ ವರಿಷ್ಠ ಡಿ.ಎಲ್‌.ನಾಗೇಶ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2021, 14:48 IST
Last Updated 5 ಮಾರ್ಚ್ 2021, 14:48 IST
ಬೀದರ್‌ನ ಪೊಲೀಸ್‌ ಕವಾಯತು ಮೈದಾನದಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್‌ ಕ್ರೀಡಾಕೂಟಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠ ಡಿ.ಎಲ್‌.ನಾಗೇಶ ಅವರು ಬಲೂನ್‌ ಹಾರಿ ಬಿಡುವ ಮೂಲಕ ಉದ್ಘಾಟಿಸಿದರು
ಬೀದರ್‌ನ ಪೊಲೀಸ್‌ ಕವಾಯತು ಮೈದಾನದಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್‌ ಕ್ರೀಡಾಕೂಟಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠ ಡಿ.ಎಲ್‌.ನಾಗೇಶ ಅವರು ಬಲೂನ್‌ ಹಾರಿ ಬಿಡುವ ಮೂಲಕ ಉದ್ಘಾಟಿಸಿದರು   

ಬೀದರ್‌: ‘ದೈಹಿಕ ಸದೃಢತೆ ಹಾಗೂ ಮಾನಸಿಕ ಸ್ವಾಸ್ಥ್ಯಕ್ಕೆ ಕ್ರೀಡೆ ಅಗತ್ಯ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠ ಡಿ.ಎಲ್‌.ನಾಗೇಶ ಹೇಳಿದರು.

ನಗರದ ಪೊಲೀಸ್‌ ಕವಾಯತು ಮೈದಾನದಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್‌ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪೊಲೀಸರು ಯಾವಾಗಲೂ ಒತ್ತಡದಲ್ಲೇ ಕೆಲಸ ಮಾಡಬೇಕಾಗುತ್ತದೆ. ಕೋವಿಡ್‌ ಅವಧಿಯಲ್ಲಿ ಪೊಲೀಸ್ ಸಿಬ್ಬಂದಿ ಬಿಡುವಿಲ್ಲದಂತೆ ಕೆಲಸ ಮಾಡಿದ್ದಾರೆ. ಒತ್ತಡದ ಮಧ್ಯೆಯೂ ಒಂದಿಷ್ಟು ಬಿಡುಗ ಮಾಡಿಕೊಂಡು ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಮನಸ್ಸು ಹಗುರವಾಗಿ ಇನ್ನಷ್ಟು ಆಸಕ್ತಿಯಿಂದ ಕೆಲಸ ಮಾಡಲು ಸಾಧ್ಯವಾಗುತ್ತದೆ’ ಎಂದರು.

ADVERTISEMENT

ಅಂತರರಾಷ್ಟ್ರೀಯ ಅಥ್ಲಿಟ್‌ ಮೌಲಪ್ಪ ಮಾಳಗೆ ಹಾಗೂ ಫುಟಬಾಲ್‌ ಪಟು ಮಹಮ್ಮದ್‌ ತಂಜೀಮ್ ಪರ್ವೇಜ್ ಅವರನ್ನು ಸನ್ಮಾನಿಸಲಾಯಿತು.

ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್‌ಪಿ ಹನಮಂತರಾಯ ಇದ್ದರು. ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಸ್ವಾಗತಿಸಿದರು. ಪೊಲೀಸ್‌ ಕಾನ್‌ಸ್ಟೆಬಲ್‌ ವರದರಾಜ್‌ ಕಾರ್ಯಕ್ರಮ ನಿರೂಪಿಸಿದರು. ಡಿವೈಎಸ್‌ಪಿ ಬಸವರಾಜ ಹೀರಾ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.