ADVERTISEMENT

ಸಂಗೊಳ್ಳಿ ರಾಯಣ್ಣ ಭಾವಚಿತ್ರ ಇರಿಸಿ ಗೌರವಿಸುವಂತೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 1 ಜುಲೈ 2021, 14:20 IST
Last Updated 1 ಜುಲೈ 2021, 14:20 IST

ಬೀದರ್: ಸ್ವಾತಂತ್ರ್ಯೋತ್ಸವ ಹಾಗೂ ಗಣರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರ ಇರಿಸಿ ಗೌರವಿಸಬೇಕು ಎಂದು ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸೇನೆ ಒತ್ತಾಯಿಸಿದೆ.

ಸೇನೆಯ ಪದಾಧಿಕಾರಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಗುರುವಾರ ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಸಲ್ಲಿಸಿದರು.

ಸಂಗೊಳ್ಳಿ ರಾಯಣ್ಣ ಅವರು 1796 ರ ಆಗಸ್ಟ್ 15 ರಂದು ಜನಿಸಿದ್ದರು. 1831 ರ ಜನವರಿ 26 ರಂದು ಅವರನ್ನು ಗಲ್ಲಿಗೆ ಏರಿಸಲಾಗಿತ್ತು. ಹೀಗಾಗಿ ಸ್ವಾತಂತ್ರ್ಯೋತ್ಸವ ಹಾಗೂ ಗಣರಾಜ್ಯೋತ್ಸವ ದಿನ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವಿಸುವಂತೆ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

ಜಿಲ್ಲಾ ಘಟಕದ ಅಧ್ಯಕ್ಷ ಸುಧಾಕರ ಪಾತರಪಳ್ಳಿ, ಉಪಾಧ್ಯಕ್ಷ ಪ್ರಕಾಶ ಚರಪಳ್ಳಿ ನಿಯೋಗದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.