ADVERTISEMENT

ಸಸಿ ನೆಟ್ಟು ಬೆಳೆಸಿ: ಗಂಗಣ್ಣ ಸ್ವಾಮಿ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2021, 16:00 IST
Last Updated 26 ಮಾರ್ಚ್ 2021, 16:00 IST
ಬೀದರ್ ತಾಲ್ಲೂಕಿನ ರೇಕುಳಗಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪರಿಸರ ಸಂರಕ್ಷಣೆ ಉಪನ್ಯಾಸ ಕಾರ್ಯಕ್ರಮವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಣ್ಣ ಸ್ವಾಮಿ ಉದ್ಘಾಟಿಸಿದರು
ಬೀದರ್ ತಾಲ್ಲೂಕಿನ ರೇಕುಳಗಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪರಿಸರ ಸಂರಕ್ಷಣೆ ಉಪನ್ಯಾಸ ಕಾರ್ಯಕ್ರಮವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಣ್ಣ ಸ್ವಾಮಿ ಉದ್ಘಾಟಿಸಿದರು   

ರೇಕುಳಗಿ(ಜನವಾಡ): ಸಾಲು ಮರದ ತಿಮ್ಮಕ್ಕ ಅವರಂತೆ ಪ್ರತಿಯೊಬ್ಬರೂ ಸಸಿಗಳನ್ನು ನೆಟ್ಟು ಬೆಳೆಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಣ್ಣ ಸ್ವಾಮಿ ನುಡಿದರು.

ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಕೊ ಕ್ಲಬ್ ವತಿಯಿಂದ ಆಯೋಜಿಸಿದ್ದ ಪರಿಸರ ಸಂರಕ್ಷಣೆ ಹಾಗೂ ಕೋವಿಡ್‍ನೊಂದಿಗೆ ಬದುಕು ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಕೃತಿ ತನ್ನ ಸರ್ವಸ್ವವನ್ನೂ ಮಾನವನಿಗೆ ನೀಡಿದೆ. ಹೀಗಾಗಿ ಅದನ್ನು ಉತ್ತಮ ರೀತಿಯಲ್ಲಿ ಉಳಿಸಿಕೊಳ್ಳಬೇಕು. ಅರಣ್ಯ ನಾಶದಿಂದ ಮಳೆ ಕಡಿಮೆಯಾಗಿದೆ. ನೈರ್ಮಲ್ಯ ಹಾಳುಗೆಡವಿದರೆ ಸಾಂಕ್ರಾಮಿಕ ರೋಗಗಳು ಹೆಚ್ಚಲಿವೆ ಎಂದು ಆತಂಕ ವ್ಯಕ್ತಪಡಿಸಿದರು.

ADVERTISEMENT

ತಾಲ್ಲೂಕು ಪಂಚಾಯಿತಿಯ ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕಿ ಗೀತಾ ಎಸ್. ಗಡ್ಡಿ, ರಾಜ್ಯ ವಿಜ್ಞಾನ ಪರಿಷತ್ ಕಾರ್ಯಕಾರಿಣಿ ಮಂಡಳಿ ಸದಸ್ಯ ಬಾಬುರಾವ್ ದಾನಿ ಮಾತನಾಡಿದರು.

ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಬೆಲ್ದಾರ್, ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಜಿಲ್ಲಾ ಸಂಯೋಜಕ ಸಂಜೀವಕುಮಾರ ಸ್ವಾಮಿ, ಎಸ್‍ಡಿಎಂಸಿ ಅಧ್ಯಕ್ಷ ರಾಜಶೇಖರ ವಗದಾಳೆ, ಸದಸ್ಯರಾದ ಎಲಿಸ್, ಅಡೆಪ್ಪ, ಮುಖ್ಯಶಿಕ್ಷಕಿ ಶೈಲಾಕುಮಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.