ADVERTISEMENT

ಮನೆಗೊಂದು ಮರ, ಊರಿಗೊಂದು ವನ ಬೆಳೆಸಿ: ನ್ಯಾಯಾಧೀಶ ಮಲ್ಲಿಕಾರ್ಜುನ ಅಂಬಲಿ

ಕರಡ್ಯಾಳ: ಗುರುಕುಲದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 6 ಜೂನ್ 2020, 9:05 IST
Last Updated 6 ಜೂನ್ 2020, 9:05 IST
ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು
ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು   

ಭಾಲ್ಕಿ: ಮನೆಗೊಂದು ಮರ, ಊರಿಗೊಂದು ವನ ಎನ್ನುವ ತತ್ವದಡಿಯಲ್ಲಿ ನಾವು ಹೆಚ್ಚಿನ ಪ್ರಮಾಣದಲ್ಲಿ ಸಸಿಗಳನ್ನು ನೆಡುವ ಮೂಲಕ ಅರಣ್ಯ ಬೆಳೆಸಬೇಕು ಎಂದು ಜೆಎಂಎಫ್ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶ ಮಲ್ಲಿಕಾರ್ಜುನ ಅಂಬಲಿ ಹೇಳಿದರು.

ತಾಲ್ಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ಆಡಳಿತ, ಪ್ರಾದೇಶಿಕ ಅರಣ್ಯ ವಲಯ ಮತ್ತು ಸಾಮಾಜಿಕ ಅರಣ್ಯ ವಲಯದ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಪರಿಸರ ದಿನಾಚರಣೆ ನಿಮಿತ್ತ ಗಿಡಕ್ಕೆ ನೀರೆರೆದು ಮಾತನಾಡಿದರು.

ಪರಿಸರದ ಮಹತ್ವ ಅರಿತು ಎಲ್ಲರೂ ಗಿಡ ನೆಡುವ ಹವ್ಯಾಸ ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.

ADVERTISEMENT

ಗುರುಬಸವ ಪಟ್ಟದ್ದೇವರು ಮಾತನಾಡಿ, ಪರಿಸರದ ಕಾಳಜಿ ಕೇವಲ ಪರಿಸರದ ದಿನ ಆಚರಣೆಗೆ ಸೀಮಿತವಾಗಬಾರದು ಎಂದು ಅವರು ಹೇಳಿದರು.

ಮಹಾಲಿಂಗ ಸ್ವಾಮೀಜಿ, ಜೆಎಂಎಫ್ ಕಿರಿಯ ಶ್ರೇಣಿ ನ್ಯಾಯಾಧೀಶ ಪ್ರಶಾಂತ ಬಾದವಾಡಗಿ, ಸರ್ಕಾರಿ ಸಹಾಯಕ ವಕೀಲ ಶಿವರಾಜ ಶೆಟಕಾರ್, ಉಪ ತಹಶೀಲ್ದಾರ್ ದಿಲರಾಜ್ ಪಸರಗಿ, ಡಿವೈಎಸ್ಪಿ ಡಾ.ದೇವರಾಜ ಬಿ, ತಾಲ್ಲೂಕು ಪಂಚಾಯಿತಿ ಇಒ ಚಿತ್ರಲೇಖಾ ಪಾಟೀಲ, ಎಡಿ ಶಿವಲೀಲಾ, ಲೋಕೋಪಯೋಗಿ ಇಲಾಖೆಯ ಎಇಇ ಶಿವಶಂಕರ ಕಾಮಶೆಟ್ಟಿ, ವಕೀಲ ವೈಜಿನಾಥ ಸಿರ್ಸಗಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹ್ಮದ್ ಮೈನೋದ್ಧಿನ್, ಅರಣ್ಯಾಧಿಕಾರಿ ಕರೇಪ್ಪ ಪೂಜಾರಿ, ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಪ್ರಕಾಶ ನಿಪ್ಪಾಣಿ, ಸಂಜೀವ, ವೈಹಿನಾಥ, ಜುಬೇರ್, ಶಿವಾನಂದ, ಸಂತೋಷ ಅವರು
ಇದ್ದರು.

ಆಡಳಿತಾಧಿಕಾರಿ ಮೋಹನ ರೆಡ್ಡಿ ಸ್ವಾಗತಿಸಿದರು. ಮಧುಕರ ಗಾಂವಕರ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.