ADVERTISEMENT

ರಸ್ತೆಯಲ್ಲಿ ಸಸಿ ನೆಟ್ಟು ಪ್ರತಿಭಟನೆ

ಅಧಿಕಾರಿಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2021, 16:12 IST
Last Updated 11 ಫೆಬ್ರುವರಿ 2021, 16:12 IST
ಬೀದರ್‌ನ ಬೊಮ್ಮಗೊಂಡೇಶ್ವರ ವೃತ್ತದ ಬಳಿ ರಸ್ತೆಯಲ್ಲಿ ಸೃಷ್ಟಿಯಾದ ತಗ್ಗಿನಲ್ಲಿ ಕರವೇ ಕಾರ್ಯಕರ್ತರು ಗುರುವಾರ ಸಸಿ ನೆಟ್ಟು ಪ್ರತಿಭಟನೆ ನಡೆಸಿದರು
ಬೀದರ್‌ನ ಬೊಮ್ಮಗೊಂಡೇಶ್ವರ ವೃತ್ತದ ಬಳಿ ರಸ್ತೆಯಲ್ಲಿ ಸೃಷ್ಟಿಯಾದ ತಗ್ಗಿನಲ್ಲಿ ಕರವೇ ಕಾರ್ಯಕರ್ತರು ಗುರುವಾರ ಸಸಿ ನೆಟ್ಟು ಪ್ರತಿಭಟನೆ ನಡೆಸಿದರು   

ಬೀದರ್: ಇಲ್ಲಿಯ ಬೊಮ್ಮಗೊಂಡೇಶ್ವರ ವೃತ್ತ ಸಮೀಪದ ರಸ್ತೆಯಲ್ಲಿ ಸೃಷ್ಟಿಯಾದ ಗುಂಡಿಯಲ್ಲಿ ಸಸಿ ನೆಡುವ ಮೂಲಕ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಗುರುವಾರ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಹೃದಯ ಭಾಗದಲ್ಲಿ ಇರುವ ರಸ್ತೆಯಲ್ಲಿ ತಗ್ಗು ನಿರ್ಮಾಣಗೊಂಡ ಕಾರಣ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಅನೇಕರು ಬಿದ್ದು ಗಾಯಗೊಂಡ ಉದಾಹರಣೆಗಳೂ ಇವೆ. ಆದಾಗಿಯೂ ಸಂಬಂಧಪಟ್ಟವರು ಗಮನಹರಿಸದ ಕಾರಣ ಸಸಿ ನೆಟ್ಟು ಪ್ರತಿಭಟನೆ ನಡೆಸಲಾಗಿದೆ ಎಂದು ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ವೇದಿಕೆಯ ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ಗಣೇಶ ಪಾಟೀಲ ತಿಳಿಸಿದರು.

ವೇದಿಕೆಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗೋಪಾಲ್ ಕುಲಕರ್ಣಿ, ಬಸವಕಲ್ಯಾಣ ತಾಲ್ಲೂಕು ಘಟಕದ ಅಧ್ಯಕ್ಷ ಸಂಜು ಯಾದವ್, ಮಾಹಿತಿ ಹಕ್ಕು ಕಾರ್ಯಕರ್ತರ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ದಿಲೀಪ್ ದೊಡ್ಡಮನಿ, ಮಾನವ ಹಕ್ಕುಗಳ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಖಂಡಪ್ಪ ಪಾತರಪಳ್ಳಿ, ಭಾಲ್ಕಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಗಿರೀಶ ಬಿರಾದಾರ, ಕಿರಣ ಪಾಟೀಲ, ಮಾರುತಿ ಹಾರಕೂಡೆ, ಅಮರ ಚಂದ್ರ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.