ADVERTISEMENT

ಸ್ಫೋಟಕಗಳನ್ನು ಪತ್ತೆ ಹಚ್ಚುತ್ತಿದ್ದ ಶ್ವಾನ: ಅಗಲಿದ ‘ಬ್ರುನೋ’ಗೆ ಪೊಲೀಸ್‌ ಗೌರವ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಮಾರ್ಚ್ 2024, 11:30 IST
Last Updated 31 ಮಾರ್ಚ್ 2024, 11:30 IST

ಪೊಲೀಸ್‌ ಇಲಾಖೆಯ ಅತ್ಯಂತ ದಕ್ಷ ಶ್ವಾನವೆಂದೆ ಗುರುತಿಸಿಕೊಂಡಿದ್ದ ‘ಬ್ರುನೋ’ ಭಾನುವಾರ ನಿಧನ ಹೊಂದಿದೆ. ಭಾನುವಾರ ಮಧ್ಯಾಹ್ನ ಬೀದರ್‌ನ ಪೊಲೀಸ್‌ ಹೆಡ್‌ಕ್ವಾರ್ಟರ್‌ನಲ್ಲಿ ಪೊಲೀಸ್‌ ಗೌರವದೊಂದಿಗೆ ಬ್ರುನೋ ಅಂತ್ಯಕ್ರಿಯೆ ನೆರವೇರಿಸಲಾಯಿತು. ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌.ಎಲ್‌., ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣನವರ, ಡಿವೈಎಸ್ಪಿ ಶಿವನಗೌಡ ಪಾಟೀಲ ಸೇರಿದಂತೆ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ಬ್ರುನೋಗೆ ಅಂತಿಮ ಗೌರವ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.