ಬೀದರ್: ₹5.51 ಲಕ್ಷ ಮೌಲ್ಯದ ಗಾಂಜಾ ಅನ್ನು ಜಿಲ್ಲಾ ಪೊಲೀಸರು ಭಾಲ್ಕಿ ತಾಲ್ಲೂಕಿನ ಧನ್ನೂರ ಗ್ರಾಮದ ಬಯೋಟೆಕ್ ಜೈವಿಕ ತ್ಯಾಜ್ಯ ವಿಲೇವಾರಿ ಘಟಕದ ಕುಲುಮೆಯಲ್ಲಿ ಬುಧವಾರ ನಾಶಪಡಿಸಿದರು.
ಎನ್‌ಡಿಪಿಎಸ್ ಕಾಯ್ದೆಅಡಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಜಪ್ತಿ ಮಾಡಿದ್ದ 728 ಕೆ.ಜಿ ಗಾಂಜಾ ನಾಶಗೊಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಡಿವೈಎಸ್ಪಿಗಳಾದ ಶಿವನಗೌಡ ಪಾಟೀಲ, ಶಿವಾನಂದ ಪವಾಡಶೆಟ್ಟಿ ಮತ್ತಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.