ADVERTISEMENT

₹83.86 ಲಕ್ಷ ಮೌಲ್ಯದ ಸಾಮಗ್ರಿಗಳು ವಾರಸುದಾರರಿಗೆ

ಸಾರ್ವಜನಿಕರೊಂದಿಗೆ ಮುಖಾಮುಖಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2018, 14:49 IST
Last Updated 31 ಡಿಸೆಂಬರ್ 2018, 14:49 IST
ಬೀದರ್‌ನ ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಸೋಮವಾರ ಸಾರ್ವಜನಿಕರೊಂದಿಗೆ ಮುಖಾಮುಖಿ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಕಳ್ಳತನವಾಗಿದ್ದ ಚಿನ್ನದ ಸರವನ್ನು ಮಾಲೀಕರಿಗೆ ಒಪ್ಪಿಸಿದರು
ಬೀದರ್‌ನ ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಸೋಮವಾರ ಸಾರ್ವಜನಿಕರೊಂದಿಗೆ ಮುಖಾಮುಖಿ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಕಳ್ಳತನವಾಗಿದ್ದ ಚಿನ್ನದ ಸರವನ್ನು ಮಾಲೀಕರಿಗೆ ಒಪ್ಪಿಸಿದರು   

ಬೀದರ್‌: ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಸೋಮವಾರ ಪೊಲೀಸ್‌ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಮುಖಾಮುಖಿ ಕಾರ್ಯಕ್ರಮ ನಡೆಸಿ ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳಿಂದ ವಶಪಡಿಸಿಕೊಂಡ ಸ್ವತ್ತುಗಳನ್ನು ವಾರಸುದಾರರಿಗೆ ಮರಳಿಸಿದರು.

ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಕಳುವಾದ ₹5.59 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ವಾಹನಗಳ ಪೈಕಿ ₹4.21 ಕೋಟಿ ಮೌಲ್ಯದ ಸಾಮಗ್ರಿಗಳನ್ನು ಪತ್ತೆ ಹಚ್ಚಿದ್ದು, ₹ 83.86 ಲಕ್ಷ ಮೌಲ್ಯದ ಸಾಮಗ್ರಿಗಳನ್ನು ವಾರಸುದಾರರಿಗೆ ಒಪ್ಪಿಸಿದರು. ಇವುಗಳಲ್ಲಿ ನಗದು, ಚಿನ್ನ, ಬೆಳ್ಳಿ, ಲಾರಿ, ಟ್ರ್ಯಾಕ್ಟರ್, ಮೋಟರ್‌ ಸೈಕಲ್‌ಗಳು ಸೇರಿವೆ.

‘₹ 15.36 ಲಕ್ಷ ನಗದು, ₹ 17.23 ಲಕ್ಷ ಮೌಲ್ಯದ ಚಿನ್ನಾಭರಣ, ₹ 24.11 ಮೌಲ್ಯದ 55 ದ್ವಿಚಕ್ ರವಾಹನಗಳು, ₹ 29 ಲಕ್ಷ ಮೌಲ್ಯದ ಎರಡು ಲಾರಿಗಳು, ₹ 11.98 ಲಕ್ಷ ಮೌಲ್ಯದ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಶ್ರೀಧರ ತಿಳಿಸಿದರು.

ADVERTISEMENT

‘ಡಕಾಯಿತಿ, ಸುಲಿಗೆ, ಮನೆಗಳ್ಳತನ, ಜಾನುವಾರು ಕಳ್ಳತನ ಮಾಡಿದ ಆರೋಪಿಗಳನ್ನು ಬಂಧಿಸಲಾಗಿದೆ. ನ್ಯಾಯಾಲಯ ಒಪ್ಪಿಗೆ ಕೊಟ್ಟಿರುವ ಸ್ವತ್ತುಗಳನ್ನು ವಾರಸುದಾರರು ಹಾಗೂ ಮಾಲೀಕರಿಗೆ ಒಪ್ಪಿಸಲಾಗಿದೆ’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು, ಡಿವೈಎಸ್‌ಪಿ ಹಾಗೂ ಪೊಲೀಸ್‌ ಇನ್‌ಸ್ಪೆಕ್ಟರ್‌ಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.