
ಪ್ರಜಾವಾಣಿ ವಾರ್ತೆ
ಬೀದರ್: ‘ಬಿಹಾರ ಚುನಾವಣೆಯ ಫಲಿತಾಂಶದ ನಂತರ ಇಡೀ ದೇಶದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
ನಗರದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಸಲ ಬಿಹಾರದಲ್ಲಿ ಕಾಂಗ್ರೆಸ್–ಆರ್‌ಜೆಡಿ ಹಾಗೂ ಇತರೆ ಪಕ್ಷಗಳ ಮೈತ್ರಿಕೂಟ ಜಯ ಗಳಿಸುವುದು ಖಚಿತ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಜನಪ್ರಿಯತೆ ಹೆಚ್ಚಾಗಿದೆ. ಬದಲಾವಣೆಯ ಗಾಳಿ ಬೀಸಿದೆ ಎಂದರು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಮತ ಕಳ್ಳತನ ಮಾಡಿರುವುದು ಪ್ರತಿಯೊಬ್ಬರಿಗೂ ಗೊತ್ತಾಗಿದೆ. ಜನ ಈಗ ಜಾಗೃತರಾಗಿದ್ದಾರೆ. ಬಿಹಾರ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.