
ಪ್ರಜಾವಾಣಿ ವಾರ್ತೆ
ಹುಮನಾಬಾದ್ (ಬೀದರ್ ಜಿಲ್ಲೆ): ಇಲ್ಲಿನ ಪಟ್ಟಣ ಪಂಚಾಯಿತಿಯ ವಾರ್ಡ್ ಸಂಖ್ಯೆ 11ರ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಡಿ. ಅಬ್ದುಲ್ ರಜಾಕ್ ಅವರು 168 ಮತಗಳನ್ನು ಪಡೆದು, ವಿಜೇತರಾಗಿದ್ದಾರೆ.
ಬಿಜೆಪಿ ಅಭ್ಯರ್ಥಿ ರಾಜಕುಮಾರ ನಾಗಣ್ಣ ಅವರು 58 ಮತ್ತು ಜೆಡಿಎಸ್ ಅಭ್ಯರ್ಥಿ ಖಾಜಾಮಿಯ್ಯಾ ಧುಲೆಸಾಬ್ 20 ಮತಗಳನ್ನು ಪಡೆದಿದ್ದಾರೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ. ಮತ ಎಣಿಕೆ ತಹಶೀಲ್ದಾರ್ ಕಚೇರಿಯಲ್ಲಿ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.