ADVERTISEMENT

ವಾಯು ಮಾಲಿನ್ಯ ನಿಯಂತ್ರಣಕ್ಕೆ ಕೈಜೋಡಿಸಿ

ಸಾರಿಗೆ ಇಲಾಖೆ ಜಂಟಿ ಆಯುಕ್ತೆ ಓಂಕಾರೇಶ್ವರಿ ಮನವಿ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2019, 15:12 IST
Last Updated 7 ನವೆಂಬರ್ 2019, 15:12 IST
ಬೀದರ್‌ನ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ವಾಯು ಮಾಲಿನ್ಯ ಮಾಸಾಚರಣೆ ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖೆಯ ಕಲಬುರ್ಗಿ ವಿಭಾಗದ ಜಂಟಿ ಆಯುಕ್ತೆ ಓಂಕಾರೇಶ್ವರಿ ಮಾತನಾಡಿದರು. ಕೆ.ಟಿ. ವಿಶ್ವನಾಥ, ಅಬ್ದುಲ್ ಖದೀರ್ ಇದ್ದರು
ಬೀದರ್‌ನ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ವಾಯು ಮಾಲಿನ್ಯ ಮಾಸಾಚರಣೆ ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖೆಯ ಕಲಬುರ್ಗಿ ವಿಭಾಗದ ಜಂಟಿ ಆಯುಕ್ತೆ ಓಂಕಾರೇಶ್ವರಿ ಮಾತನಾಡಿದರು. ಕೆ.ಟಿ. ವಿಶ್ವನಾಥ, ಅಬ್ದುಲ್ ಖದೀರ್ ಇದ್ದರು   

ಬೀದರ್: ‘ವಾಯು ಮಾಲಿನ್ಯ ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಬೇಕು’ ಎಂದು ಸಾರಿಗೆ ಇಲಾಖೆಯ ಕಲಬುರ್ಗಿ ವಿಭಾಗದ ಜಂಟಿ ಆಯುಕ್ತೆ ಓಂಕಾರೇಶ್ವರಿ ಮನವಿ ಮಾಡಿದರು.

ಬೀದರ್ ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ನಗರದ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ವಾಯು ಮಾಲಿನ್ಯ ಜಾಗೃತಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಾಯು ಮಾಲಿನ್ಯದಿಂದ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಆಸ್ತಮಾ, ಕಾನ್ಸರ್‌ನಂತಹ ಗಂಭೀರ ಸ್ವರೂಪದ ಕಾಯಿಲೆಗಳು ಬರುವ ಸಾಧ್ಯತೆ ಇರುತ್ತದೆ’ ಎಂದು ತಿಳಿಸಿದರು.

ADVERTISEMENT

‘ವಾಯು ಮಾಲಿನ್ಯ ಹೆಚ್ಚಳದ ಕಾರಣ ದೆಹಲಿಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂತಹ ಪರಿಸ್ಥಿತಿ ಈ ಭಾಗದಲ್ಲಿ ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕಾದ ಅಗತ್ಯ ಇದೆ’ ಎಂದು ಹೇಳಿದರು.

ಬೀದರ್ ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ಟಿ. ವಿಶ್ವನಾಥ ಮಾತನಾಡಿ, ‘ರಸ್ತೆಯಲ್ಲಿ ವಾಹನ ಚಾಲನೆ ಮಾಡುವಾಗ ಎಚ್ಚರಿಕೆ ವಹಿಸಬೇಕು. ಎಲ್ಲ ದಾಖಲಾತಿಗಳನ್ನು ಬಳಿಯಲ್ಲಿ ಇಟ್ಟುಕೊಂಡಿರಬೇಕು. ಪೊಲೀಸ್ ಹಾಗೂ ಆರ್‌ಟಿಒ ಅಧಿಕಾರಿಗಳು ಸಾರ್ವಜನಿಕರ ಹಿತರಕ್ಷಣೆ ಕೆಲಸ ಮಾಡುವುದರಿಂದ ಅವರಿಗೆ ಹೆದರುವ ಅವಶ್ಯತೆ ಇಲ್ಲ’ ಎಂದರು.

‘ದ್ವಿಚಕ್ರ ವಾಹನ ಸವಾರರು ತಪ್ಪದೇ ಹೆಲ್ಮೆಟ್ ಧರಿಸಬೇಕು. ನಾಲ್ಕು ಚಕ್ರಗಳ ವಾಹನ ಸವಾರರು ಸೀಟ್ ಬೆಲ್ಟ್ ಧರಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು’ ಎಂದು ತಿಳಿಸಿದರು.

ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಮಾತನಾಡಿ, ‘ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಮೈಗೂಡಿಸಿಕೊಳ್ಳಬೇಕು. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಜಾರಿಗೆ ತರುವ ಕಾನೂನುಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು’ ಹೇಳಿದರು.

ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಶಾಹೀನ್ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.