ADVERTISEMENT

ಪ್ರತಿಭೆ ಅರಳಿಸುವುದೇ ಪ್ರತಿಭಾ ಕಾರಂಜಿ

ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೊಳ್ಕರ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2022, 14:07 IST
Last Updated 23 ನವೆಂಬರ್ 2022, 14:07 IST
ಭಾಲ್ಕಿಯ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೊಳ್ಕರ್ ಚಾಲನೆ ನೀಡಿದರು
ಭಾಲ್ಕಿಯ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೊಳ್ಕರ್ ಚಾಲನೆ ನೀಡಿದರು   

ಭಾಲ್ಕಿ: ‘ಪುಟಾಣಿ ಮಕ್ಕಳಲ್ಲಿನ ಪ್ರತಿಭೆ ಅರಳಿಸುವುದೇ ಪ್ರತಿಭಾ ಕಾರಂಜಿಯ ಮೂಲ ಉದ್ದೇಶ’ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೊಳ್ಕರ್ ಹೇಳಿದರು.

ಪಟ್ಟಣದ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ (ಕಲೋತ್ಸವ) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಸರ್ವರಿಗೂ ತೋರ್ಪಡಿಸಲು ಇದು ಸೂಕ್ತ ಅವಕಾಶ ಎಂದು ಹೇಳಿದರು.

ADVERTISEMENT

ಪುರಸಭೆ ಅಧ್ಯಕ್ಷ ಅನಿಲ್ ಸುಂಟೆ ಮಾತನಾಡಿ,‘ಪುಟಾಣಿ ಮಕ್ಕಳಲ್ಲಿಯ ವಿಶೇಷ ಪ್ರತಿಭೆ ಗುರುತಿಸಲು ಇದು ಸೂಕ್ತ ವೇದಿಕೆಯಾಗಿದೆ. ಇಲ್ಲಿ ಯಾರಿಗೂ ತಾರತಮ್ಯ ಮಾಡದೇ, ಸೂಕ್ತ ಪ್ರತಿಭೆಗಳನ್ನು ಗುರುತಿಸುವ ಕಾರ್ಯವಾಗಬೇಕು’ ಎಂದು ಸಲಹೆ ನೀಡಿದರು.

ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮಲ್ಲಿನಾಥ ಸಜ್ಜನ್, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ರೋಹಿದಾಸ ರಾಠೋಡ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಜೆಪ್ಪ ಪಾಟೀಲ, ಪ್ರೌಢ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ದತ್ತು ಕಾಟ್ಕರ್, ಕಾರ್ಯದರ್ಶಿ ಬಾಲಾಜಿ ಕಾಂಬಳೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸೂರ್ಯಕಾಂತ ಸುಂಟೆ, ಕಾರ್ಯದರ್ಶಿ ಅಶೋಕ ಕುಂಬಾರ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸುಭಾಷ ಇಟಗೆ, ವಸಂತ ಹುಣಸನಾಳೆ, ಸುಭಾಷ ಹುಲಸೂರೆ, ಸುನಿತಾ ಮಮ್ಮಾ, ಶಿವಕುಮಾರ, ಜಯರಾಮ, ಸಹದೇವ ಜಿ., ಹಣಮಂತ ಕಾರಾಮುಂಗೆ, ಬಿಆರ್‌ಪಿ ಶಕುಂತಲಾ ಸಾಲಮನಿ, ಪಾರ್ವತಿ ಧುಮ್ಮನಸೂರೆ, ಕೀರ್ತಿಲತಾ ಹೊಸಾಳೆ, ಭೀಮಣ್ಣ ಕೊಂಕಣೆ, ಸೋಮನಾಥ ಹೊಸಾಳೆ, ಮಾಯಾದೇವಿ ಗೋಖಲೆ, ಜಿಪ್ಸನ್ ಕೋಟೆ, ರತ್ನದೀಪ ಹುಸಲೂರೆ, ಗೋವಿಂದರಾವ್ ಬಿರಾದಾರ, ಬಸವರಾಜ ತೆಗಂಪೂರೆ, ಮಲ್ಲಿಕಾರ್ಜುನ ಪಾಟೀಲ, ಬಸವರಾಜ ಕುಶನೂರೆ, ಪರಮೇಶ್ವರ ಕರಡ್ಯಾಳೆ, ಮುಖ್ಯ ಶಿಕ್ಷಕ ಜಯರಾಜ ದಾಬಶೆಟ್ಟಿ, ಮಲ್ಲಿಕಾರ್ಜುನ ಪಾಟೀಲ ಇದ್ದರು.

ಭಗವಾನ ವಲಂಡೆ ಸ್ವಾಗತಿಸಿದರು. ದೀಪಕ ಠಮಕೆ ನಿರೂಪಿಸಿದರು. ಅಶೋಕ ತಾಂಬೋಳೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.