
ಭಾಲ್ಕಿ (ಬೀದರ್ ಜಿಲ್ಲೆ): ಜೆಇಇ ಮೇನ್ಸ್ ಮೊದಲ ಹಂತದ ಪರೀಕ್ಷೆಯಲ್ಲಿ ತಾಲ್ಲೂಕಿನ ಕರಡ್ಯಾಳ ಶ್ರೀ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿ ಪ್ರೀತಂ ಧೂಲಫ್ಫ ಶೇ 99.77ರಷ್ಟು ಅಂಕ ಗಳಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
‘ಪ್ರಾಧ್ಯಾಪಕರ ಮಾರ್ಗದರ್ಶನ, ಸಲಹೆ ಪಾಲಿಸುತ್ತ ಸತತ ಎರಡು ವರ್ಷಗಳಿಂದ ವಿದ್ಯಾಭ್ಯಾಸದಲ್ಲಿ ಸ್ಥಿರತೆ ಕಾಪಾಡಿಕೊಂಡು ಓದಿದ್ದೇನೆ. ಪ್ರತಿನಿತ್ಯ ಕನಿಷ್ಠ 50 ಪ್ರಶ್ನೆಗಳನ್ನು ಬಿಡಿಸುತ್ತಿದ್ದೆ. ನಿತ್ಯ ಎಷ್ಟು ಓದಬೇಕೆಂದು ನಿರ್ಧರಿಸಿ ಅದಕ್ಕೆ ತಕ್ಕಂತೆ ಓದುತ್ತಿದ್ದೆ. ಇದರಿಂದ ಫಲಿತಾಂಶ ಉತ್ತಮವಾಗಿ ಬಂದಿದೆ’ ಎಂದು ಪ್ರೀತಂ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.
ಭಾಲ್ಕಿ ತಾಲ್ಲೂಕಿನ ಕರಡ್ಯಾಳ ಗ್ರಾಮದ ಪ್ರೀತಂ ತಂದೆ ಕೃಷಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದು, ತಾಯಿ ಗೃಹಿಣಿ. ಒಂದರಿಂದ 10ನೇ ತರಗತಿವರೆಗೆ ಬೀದರ್ ಜ್ಞಾನಸುಧಾ ವಿದ್ಯಾಲಯದಲ್ಲಿ ಅಭ್ಯಾಸ ಮಾಡಿದ್ದು, ಪಿಯುಸಿ ಚನ್ನಬಸವೇಶ್ವರ ಗುರುಕುಲದಲ್ಲಿ ಅಭ್ಯಾಸ ಓದುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.