ADVERTISEMENT

ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 15:09 IST
Last Updated 30 ಸೆಪ್ಟೆಂಬರ್ 2020, 15:09 IST
ಬೀದರ್‌ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು
ಬೀದರ್‌ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು   

ಬೀದರ್‌: ಜಿಲ್ಲೆಯಲ್ಲಿ ಅಕ್ಟೋಬರ್ 4ರಂದು ನಡೆಯಲಿರುವ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.

ಕೋವಿಡ್ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು. ಪರೀಕ್ಷೆಗಳು ಪಾರದರ್ಶಕತೆಯಿಂದ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಶಿಕ್ಷಕರ ಅರ್ಹತಾ ಪರೀಕ್ಷೆಯು ಜಿಲ್ಲೆಯ 25 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಭಾರಿ ಉಪ ನಿರ್ದೇಶಕ ಇನಾಯತ್ ಅಲಿ ಶಿಂಧೆ ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಜೇಶನ್ ವ್ಯವಸ್ಥೆ ಮಾಡಲು ಕ್ರಮ ವಹಿಸಬೇಕು. ತಪಾಸಣೆ ನಡೆಸುವ ವೇಳೆ ಯಾರಿಗಾದರೂ ಕೋವಿಡ್-19 ಲಕ್ಷಣಗಳು ಕಂಡು ಬಂದರೆ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು ಎಂದು ರಾಮಚಂದ್ರನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಸ್ಥಳೀಯ ಜಾಗೃತ ದಳದ ಅಧಿಕಾರಿಗಳು ಹಾಗೂ ಮಾರ್ಗಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.