ADVERTISEMENT

ಚುನಾವಣೆಗೆ ತಯಾರಿ ನಡೆಸಿ: ಬೆಲ್ದಾಳೆ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2020, 14:37 IST
Last Updated 15 ನವೆಂಬರ್ 2020, 14:37 IST
ಬೀದರ್‌ನಲ್ಲಿ ನಡೆದ ಬಿಜೆಪಿ ಬೀದರ್ ದಕ್ಷಿಣ ಮಂಡಲ ಯುವ ಮೋರ್ಚಾ ಪದಾಧಿಕಾರಿಗಳ ಸಭೆಯಲ್ಲಿ ಪಕ್ಷದ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಮಾತನಾಡಿದರು
ಬೀದರ್‌ನಲ್ಲಿ ನಡೆದ ಬಿಜೆಪಿ ಬೀದರ್ ದಕ್ಷಿಣ ಮಂಡಲ ಯುವ ಮೋರ್ಚಾ ಪದಾಧಿಕಾರಿಗಳ ಸಭೆಯಲ್ಲಿ ಪಕ್ಷದ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಮಾತನಾಡಿದರು   

ಬೀದರ್: ಮುಂಬರುವ ದಿನಗಳಲ್ಲಿ ನಡೆಯಲಿರುವ ಎಲ್ಲ ಚುನಾವಣೆಗಳಿಗೂ ಪಕ್ಷದ ಕಾರ್ಯಕರ್ತರು ಈಗಿನಿಂದಲೇ ತಯಾರಿ ನಡೆಸಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಕಾರ್ಯಕರ್ತರಿಗೆ ಸಲಹೆ ಮಾಡಿದರು.

ನಗರದಲ್ಲಿ ನಡೆದ ಬಿಜೆಪಿ ಬೀದರ್ ದಕ್ಷಿಣ ಮಂಡಲ ಯುವ ಮೋರ್ಚಾ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಪಕ್ಷದ ಸಂಘಟನೆ ಇನ್ನಷ್ಟು ಬಲಪಡಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ADVERTISEMENT

ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಜಗನ್ನಾಥ ಪಾಟೀಲ, ಬೀದರ್ ದಕ್ಷಿಣ ಮಂಡಲ ಅಧ್ಯಕ್ಷ ರಾಜರೆಡ್ಡಿ ಶಹಾಬಾದ್, ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ, ಉಪಾಧ್ಯಕ್ಷ ಜನಾರ್ಧನ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸುಲ್ತಾನಪುರೆ, ಮಾಧ್ಯಮ ಪ್ರಮುಖ ಆಕಾಶ ರೆಡ್ಡಿ, ಬೀದರ್ ದಕ್ಷಿಣ ಘಟಕದ ಅಧ್ಯಕ್ಷ ಸಾಯಿನಾಥ ಪಾಟೀಲ ಇದ್ದರು. ಗುರು ಪಾಪಡೆ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.