ADVERTISEMENT

ಔರಾದ್‍ಗೆ ₹35.85 ಕೋಟಿ ಅತಿವೃಷ್ಟಿ ಪರಿಹಾರ: ಚವಾಣ್‌

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2022, 4:48 IST
Last Updated 1 ಅಕ್ಟೋಬರ್ 2022, 4:48 IST

ಔರಾದ್‌: ಅತಿವೃಷ್ಟಿಯಿಂದಾಗಿ ಬೆಳೆಹಾನಿಯಾದ ಔರಾದ್ ಹಾಗೂ ಕಮಲನಗರ ತಾಲ್ಲೂನ ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ₹35.85 ಕೋಟಿ ಹಣ ಬಿಡುಗಡೆಯಾಗಲಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಔರಾದ್ ತಾಲ್ಲೂಕಿನಲ್ಲಿ 13,135 ಹೆಕ್ಟೇರ್ ಹಾಗೂ ಕಮಲನಗರ ನತಾಲ್ಲೂಕಿನಲ್ಲಿ 13,229 ಹೆಕ್ಟೇರ್ ಸೇರಿದಂತೆ ಒಟ್ಟು 26,364 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಷ್ಟವಾಗಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.
ಔರಾದ್ ತಾಲ್ಲೂಕಿಗೆ ಕೇಂದ್ರ ಸರ್ಕಾರದ ರೂ. 8.93 ಕೋಟಿ ಮತ್ತು ರಾಜ್ಯ ಸರ್ಕಾರದ ರೂ. 8.93 ಕೋಟಿ ಸೇರಿ ಒಟ್ಟು 17.86 ಕೋಟಿ ಬಿಡುಗಡೆಯಾಗಲಿದೆ ಎಂದಿದ್ದಾರೆ.

ಕಮಲನಗರ ತಾಲ್ಲೂಕಿಗೆ ಕೇಂದ್ರ ಸರ್ಕಾರದ ₹8.99 ಕೋಟಿ ಮತ್ತು ರಾಜ್ಯ ಸರ್ಕಾರದ ₹8.99 ಕೋಟಿ ಸೇರಿ ಒಟ್ಟು ₹17.99 ಕೋಟಿ ಹೀಗೆ ಎರಡು ತಾಲ್ಲೂಕುಗಳಿಗೆ ಒಟ್ಟು ₹35.85 ಕೋಟಿ ಹಣ ಬಿಡುಗಡೆಯಾಗಲಿದೆ. ಇದು ಹಂತ ಹಂತವಾಗಿ ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.