ADVERTISEMENT

ಗಮನ ಸೆಳೆದ ಪ್ರಧಾನಿ ಯೋಜನೆ ಛಾಯಾಚಿತ್ರ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 13:41 IST
Last Updated 7 ಅಕ್ಟೋಬರ್ 2021, 13:41 IST
ಬೀದರ್ ತಾಲ್ಲೂಕಿನ ಕಮಠಾಣದಲ್ಲಿ ಸೇವೆ ಮತ್ತು ಸಮರ್ಪಣೆ ಅಭಿಯಾನ ಪ್ರಯುಕ್ತ ಆಯೋಜಿಸಿದ್ದ ಪ್ರಧಾನಿ ನರೇಂದ್ರಿ ಮೋದಿ ಅವರ ಯೋಜನೆಗಳ ಮಾಹಿತಿ ಒಳಗೊಂಡ ಛಾಯಾಚಿತ್ರ ಪ್ರದರ್ಶನ ಗಮನ ಸೆಳೆಯಿತು
ಬೀದರ್ ತಾಲ್ಲೂಕಿನ ಕಮಠಾಣದಲ್ಲಿ ಸೇವೆ ಮತ್ತು ಸಮರ್ಪಣೆ ಅಭಿಯಾನ ಪ್ರಯುಕ್ತ ಆಯೋಜಿಸಿದ್ದ ಪ್ರಧಾನಿ ನರೇಂದ್ರಿ ಮೋದಿ ಅವರ ಯೋಜನೆಗಳ ಮಾಹಿತಿ ಒಳಗೊಂಡ ಛಾಯಾಚಿತ್ರ ಪ್ರದರ್ಶನ ಗಮನ ಸೆಳೆಯಿತು   

ಜನವಾಡ: ಸೇವೆ ಮತ್ತು ಸಮರ್ಪಣೆ ಅಭಿಯಾನ ಪ್ರಯುಕ್ತ ಬಿಜೆಪಿಯ ಬೀದರ್ ದಕ್ಷಿಣ ಮಂಡಲ ವತಿಯಿಂದ ಬೀದರ್ ತಾಲ್ಲೂಕಿನ ಕಮಠಾಣದಲ್ಲಿ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ವಿವಿಧ ಯೋಜನೆಗಳ ಮಾಹಿತಿ ಒಳಗೊಂಡ ಛಾಯಾಚಿತ್ರಗಳ ಪ್ರದರ್ಶನ ಗಮನ ಸೆಳೆಯಿತು.

ಮೋದಿ ಅವರು 2001 ರ ಅಕ್ಟೋಬರ್ 7 ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅವರು ಸಾರ್ವಜನಿಕ ಕಚೇರಿಗೆ ಕಾಲಿಸಿರಿ ಅಕ್ಟೋಬರ್ 7ಕ್ಕೆ 20 ವರ್ಷವಾಗುತ್ತಿರುವ ಪ್ರಯುಕ್ತ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಶಿವಾನಂದ ಮಂಠಾಳಕರ್ ನುಡಿದರು.

ಕಾರ್ಯಕರ್ತರು ಮೋದಿ ಅವರ ಜನಪರ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸಬೇಕು. ಅರ್ಹರಿಗೆ ಯೋಜನೆಗಳ ಲಾಭ ತಲುಪಿಸಬೇಕು ಎಂದು ಹೇಳಿದರು.
ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ ಮಾತನಾಡಿ, ಪ್ರಧಾನಿ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ದೇಶಕ್ಕೆ ಉತ್ತಮ ಆಡಳಿತ ನೀಡುತ್ತಿದೆ. ಅನೇಕ ಯೋಜನೆಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸುತ್ತಿದೆ ಎಂದು ತಿಳಿಸಿದರು.
ಮೋದಿ ಅವರು ಕಾಂಗ್ರೆಸ್‍ಮುಕ್ತ ಭಾರತದ ಕನಸು ಕಂಡು ಈಗಾಗಲೇ ಈ ನಿಟ್ಟಿನಲ್ಲಿ ಯಶ ಸಾಧಿಸಿದ್ದಾರೆ ಎಂದು ಹೇಳಿದರು.
ಬಿಜೆಪಿ ಬೀದರ್ ದಕ್ಷಿಣ ಮಂಡಲ ಅಧ್ಯಕ್ಷ ರಾಜರೆಡ್ಡಿ ಶಾಬಾದ್, ಕಾರ್ಯಕ್ರಮದ ಜಿಲ್ಲಾ ಸಂಚಾಲಕ ಮಹೇಶ್ವರ ಸ್ವಾಮಿ, ಚನ್ನಪ್ಪ ಗೌರಶೆಟ್ಟಿ, ಚಂದ್ರಯ್ಯ ಸ್ವಾಮಿ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.