ADVERTISEMENT

ಅಧಿವೇಶನದಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮಸ್ಯೆ ಚರ್ಚೆ; ಈಶ್ವರ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2022, 8:15 IST
Last Updated 14 ಫೆಬ್ರುವರಿ 2022, 8:15 IST
ಭಾಲ್ಕಿ ಪುರಭವನದಲ್ಲಿ ನಡೆದ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆಯಲ್ಲಿ ಗೌರವ ಡಾಕ್ಟರೇಟ್ ಪುರಸ್ಕೃತ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಸಿ.ಇ.ರಂಗಸ್ವಾಮಿ ಅವರನ್ನು ಸನ್ಮಾನಿಸಲಾಯಿತು
ಭಾಲ್ಕಿ ಪುರಭವನದಲ್ಲಿ ನಡೆದ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆಯಲ್ಲಿ ಗೌರವ ಡಾಕ್ಟರೇಟ್ ಪುರಸ್ಕೃತ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಸಿ.ಇ.ರಂಗಸ್ವಾಮಿ ಅವರನ್ನು ಸನ್ಮಾನಿಸಲಾಯಿತು   

ಭಾಲ್ಕಿ: ಮುಂದಿನ ಅಧಿವೇಶನದಲ್ಲಿ ಬೀದಿ ಬದಿ ವ್ಯಾಪಾರಿಗಳು ಸಮಸ್ಯೆಗಳನ್ನು ಪ್ರಸ್ತಾಪಿಸಲಾಗುವುದು ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಪುರಭವನದಲ್ಲಿ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ತಾಲ್ಲೂಕು ಘಟಕದ ವತಿಯಿಂದ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೋವಿಡ್ ವೇಳೆ ತೊಂದರೆ ಅನುಭವಿಸಿದ ವ್ಯಾಪಾರಿಗಳ ಕುಟುಂಬಕ್ಕೆ ತಲಾ ₹10 ಸಾವಿರ ಪರಿಹಾರ ನೀಡವಂತೆ ಸರ್ಕಾರದದ ಮೇಲೆ ಒತ್ತಡ ತರಲಾಯಿತು. ಆದರೆ, ತಲಾ ₹2 ಸಾವಿರ ನೀಡುವುದಾಗಿ ಹೇಳಿತ್ತು. ಆ ಹಣ ಎಲ್ಲ ವ್ಯಾಪಾರಿಗಳ ಕೈಸೇರಿಲ್ಲ. ಈ ಬಗ್ಗೆಯೂ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.

ADVERTISEMENT

ಒಕ್ಕೂಟದ ರಾಜ್ಯಾಧ್ಯಕ್ಷ ಸಿ.ಇ. ರಂಗಸ್ವಾಮಿ ಮಾತನಾಡಿ, ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಮಂಡಳಿ ರಚಿಸಬೇಕು ಎಂದರು.

ಸಾನ್ನಿಧ್ಯ ವಹಿಸಿದ ಗುರುಬಸವ ಪಟ್ಟದ್ದೇವರು ಮಾತನಾಡಿದರು.

ಒಕ್ಕೂಟದ ಜಿಲ್ಲಾ ಅಧ್ಯಕ್ಷ ದಿಲೀಪ ಜೋಳದಾಪಕೆ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಸ್ತುವಾರಿ ಶಾಲಿವಾನ ರಂಗಾ, ಸಂಘಟನಾ ಕಾರ್ಯದರ್ಶಿ ಇಸ್ಲಾಂ, ಕಾರ್ಯದರ್ಶಿ ಮಹಮ್ಮದ್ ರೀತಿಕ್, ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ಮುಖ್ಯಾಧಿಕಾರಿ ಶಿವರಾಜ ರಾಠೋಡ್, ಬಸವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಶಿಧರ ಕೋಸಂಬೆ, ಉಪಾಧ್ಯಕ್ಷ ಸಂಗಮೇಶ ಹುಣಜೆ ಮದಕಟ್ಟಿ, ಮಹಮ್ಮದ್ ಮೇಹತಾಬ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.