ADVERTISEMENT

ಪ್ರೊ.ಭಗವಾನ್ ಮುಖಕ್ಕೆ ಮಸಿ: ಕ್ರಮಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2021, 11:35 IST
Last Updated 5 ಫೆಬ್ರುವರಿ 2021, 11:35 IST
ಬೆಂಗಳೂರಿನಲ್ಲಿ ಲೇಖಕ ಪ್ರೊ. ಕೆ.ಎಸ್. ಭಗವಾನ್ ಅವರ ಮುಖಕ್ಕೆ ಮಸಿ ಬಳಿದ ವಕೀಲೆ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಬೀದರ್‌ನಲ್ಲಿ ಶುಕ್ರವಾರ ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಬೆಂಗಳೂರಿನಲ್ಲಿ ಲೇಖಕ ಪ್ರೊ. ಕೆ.ಎಸ್. ಭಗವಾನ್ ಅವರ ಮುಖಕ್ಕೆ ಮಸಿ ಬಳಿದ ವಕೀಲೆ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಬೀದರ್‌ನಲ್ಲಿ ಶುಕ್ರವಾರ ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಬೀದರ್: ಲೇಖಕ ಪ್ರೊ. ಕೆ.ಎಸ್.ಭಗವಾನ್ ಅವರ ಮುಖಕ್ಕೆ ಮಸಿ ಬಳಿದ ವಕೀಲೆ ಮೀರಾ ರಾಘವೇಂದ್ರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿವಿಧ ಸಂಘಟನೆಗಳು ಒತ್ತಾಯಿಸಿವೆ.

ವೀರ ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕ, ವೀರ ಕನ್ನಡಿಗರ ಸೇನೆ, ಕರ್ನಾಟಕ ಪ್ರಜಾಶಕ್ತಿ ಸಮಿತಿ, ಬಹುಜನ ಜಾಗೃತಿ ವೇದಿಕೆ, ಕರ್ನಾಟಕ ರಾಜ್ಯ ಕೂಲಿ ಕಾರ್ಮಿಕರ ಸಂಘದ ಪದಾಧಿಕಾರಿಗಳು ನಗರದಲ್ಲಿ ನಿಯೋಗದೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಮನವಿ ಸಲ್ಲಿಸಿದರು.

ಮಸಿ ಬಳಿದ ಘಟನೆ ಮನುಕುಲ ತಲೆ ತಗ್ಗಿಸುವಂಥದ್ದು. ಭಗವಾನ್ ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕದ ರಾಜ್ಯ ಘಟಕದ ಅಧ್ಯಕ್ಷ ಸುಬ್ಬಣ್ಣ ಕರಕನಳ್ಳಿ, ಜಿಲ್ಲಾ ಘಟಕದ ಅಧ್ಯಕ್ಷ ಮಕೇಶ ಶಹಾಗಂಜ್, ಕರ್ನಾಟಕ ಪ್ರಜಾಶಕ್ತಿ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಸಿಂಧೆ, ಉಪಾಧ್ಯಕ್ಷ ಮಹೇಂಧ್ರಕುಮಾರ ಸೋನಿ, ಬಹುಜನಜಾಗೃತಿ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಮೋಳಕೇರೆ, ಕರ್ನಾಟಕ ಕೂಲಿ ಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಸ್ವಾನ್, ಸತೀಶ್ ಸಕ್ಪಾಲ್ ನಿಯೋಗದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.