ADVERTISEMENT

ವೃತ್ತಿನಿರತ ಮಹಿಳೆಯರಿಗೆ ಕಾನೂನು ತಿಳಿವಳಿಕೆ ಅಗತ್ಯ: ಬಸವರಾಜ ಚೇಗರಡ್ಡಿ

ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶ ಬಸವರಾಜ ಚೇಗರಡ್ಡಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2022, 14:31 IST
Last Updated 7 ಮಾರ್ಚ್ 2022, 14:31 IST
ಬೀದರ್‌ನ ಬ್ರಿಮ್ಸ್ ಸಭಾಂಗಣದಲ್ಲಿ ಆಯೋಜಿಸಿದ್ದ ‘ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಾಗುವ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕಾಯ್ದೆ‘ ಕುರಿತ ಕಾರ್ಯಾಗಾರವನ್ನು ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶ ಬಸವರಾಜ ಚೇಗರಡ್ಡಿ ಹಾಗೂ ಶುಶ್ರೂಷಕ ಅಧಿಕಾರಿಗಳು ಜಂಟಿಯಾಗಿ ಉದ್ಘಾಟಿಸಿದರು. ವಕೀಲೆ ಅನಿತಾ ಮೂಲಗೆ, ನ್ಯಾಯಾಧೀಶ ಸಿದ್ರಾಮ ಟಿ.ಪಿ. ವೇಣುರಾಜ ಇದ್ದಾರೆ
ಬೀದರ್‌ನ ಬ್ರಿಮ್ಸ್ ಸಭಾಂಗಣದಲ್ಲಿ ಆಯೋಜಿಸಿದ್ದ ‘ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಾಗುವ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕಾಯ್ದೆ‘ ಕುರಿತ ಕಾರ್ಯಾಗಾರವನ್ನು ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶ ಬಸವರಾಜ ಚೇಗರಡ್ಡಿ ಹಾಗೂ ಶುಶ್ರೂಷಕ ಅಧಿಕಾರಿಗಳು ಜಂಟಿಯಾಗಿ ಉದ್ಘಾಟಿಸಿದರು. ವಕೀಲೆ ಅನಿತಾ ಮೂಲಗೆ, ನ್ಯಾಯಾಧೀಶ ಸಿದ್ರಾಮ ಟಿ.ಪಿ. ವೇಣುರಾಜ ಇದ್ದಾರೆ   

ಬೀದರ್‌: ‘ವಿವಿಧ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರು ತಮ್ಮ ರಕ್ಷಣೆಗೆ ಇರುವ ಕಾನೂನುಗಳ ಕುರಿತು ತಿಳಿದುಕೊಳ್ಳುವ ಅಗತ್ಯ ಇದೆ’ ಎಂದು ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಧೀಶ ಬಸವರಾಜ ಚೇಗರಡ್ಡಿ ಹೇಳಿದರು.

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ ಆಶ್ರಯದಲ್ಲಿ ಬ್ರಿಮ್ಸ್ ಸಭಾಂಗಣದಲ್ಲಿ ಮಹಿಳಾ ಶುಶ್ರೂಷಕ ಅಧಿಕಾರಿಗಳು ಹಾಗೂ ನರ್ಸಿಂಗ್ ವಿಧ್ಯಾರ್ಥಿನಿಯರಿಗೆ ‘ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಾಗುವ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕಾಯ್ದೆ’ ಕುರಿತು ನಡೆದ ಕಾರ್ಯಾಗಾರದಲ್ಲಿ ಮಾತನಾಡಿದರು.

ವಿಶ್ವದ ಎಲ್ಲ ದೇಶಗಳಲ್ಲಿಯೂ ಮಹಿಳೆಯನ್ನು ಅಬಲೆ ಎಂದು ಭಾವಿಸುವ ಕಾಲ ಒಂದಿತ್ತು. ಆದರೆ, ಈಗ ಅಂಥ ಪರಿಸ್ಥಿತಿ ಇಲ್ಲ. ಮಹಿಳೆಯರ ಸಂರಕ್ಷಣೆಗಾಗಿಯೇ ಅನೇಕ ಕಾನೂನುಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ಹಿರಿಯ ಸಿವಿಲ್ ನ್ಯಾಯಾಧೀಶ ಸಿದ್ರಾಮ ಟಿ.ಪಿ. ಮಾತನಾಡಿ, ‘ಹಿಂದಿನ ಕಾಲದಲ್ಲಿ ಬಹಳ ವಿರಳ ಸಂಖ್ಯೆಯಲ್ಲಿ ಮಹಿಳೆಯರು ಮನೆಯಿಂದ ಹೊರಗೆ ಬಂದು ದುಡಿಯುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ಮಹಿಳೆ ಸ್ವಾವಲಂಬಿ ಬದುಕು ನಡೆಸುತ್ತಿದ್ದಾಳೆ’ ಎಂದು ಹೇಳಿದರು.

ಉದ್ಯೋಗಸ್ಥ ಮಹಿಳೆಯರಿಗೆ ಉದ್ಯೋಗದ ಸ್ಥಳದಲ್ಲಿ ಲಭ್ಯವಿರುವ ಅವಳ ಹಕ್ಕುಗಳ ಬಗ್ಗೆ ತಿಳಿವಳಿಕೆ ನೀಡುವ ಉದ್ದೇಶದಿಂದ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ತಿಳಿಸಿದರು.

ವಕೀಲೆ ಅನಿತಾ ಮೂಲಗೆ ಉಪನ್ಯಾಸ ನೀಡಿದರು. ಬ್ರಿಮ್ಸ್ ಆಸ್ಪತ್ರೆಯ ಮನೋರೋಗ ತಜ್ಞ ವಿಭಾಗದ ಮುಖ್ಯಸ್ಥ ಡಾ. ಶ್ವೇತಾ ಪಾಟೀಲ, ಆರ್‌ಎಂಒ ಡಾ.ದೀಪಾ ಕೊಂಡಾ, ವೈದ್ಯಕೀಯ ಅಧೀಕ್ಷಕ ಡಾ. ಶಿವಕುಮಾರ ಶೆಟಕಾರ, ಡಾ. ಅಭಿಜಿತ್ ಪಾಟೀಲ, ಶುಶ್ರೂಷಕ ಅಧಿಕಾರಿಗಳು ಮತ್ತು ಶುಶ್ರೂಷಕ ಸಂಘದ ಅಧ್ಯಕ್ಷ ವೇಣುರಾಜ ಇದ್ದರು. ಗೌರಿಶಂಕರ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.