ADVERTISEMENT

ಸಿದ್ಧೇಶ್ವರ ಕ್ಷೇತ್ರ ಅಭಿವೃದ್ಧಿಗೆ ಸಂಕಲ್ಪ: ಬೇಮಳಖೇಡದ ರಾಜಶೇಖರ ಶಿವಾಚಾರ್ಯ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2021, 12:26 IST
Last Updated 27 ನವೆಂಬರ್ 2021, 12:26 IST
ಬೀದರ್ ಸಮೀಪದ ಮಲಗಿ ಬೆಟ್ಟದ ಸಿದ್ಧೇಶ್ವರ ಕ್ಷೇತ್ರದಲ್ಲಿ ನಡೆದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮದಲ್ಲಿ ಬೇಮಳಖೇಡದ ರಾಜಶೇಖರ ಶಿವಾಚಾರ್ಯ ಅವರನ್ನು ಸನ್ಮಾನಿಸಲಾಯಿತು
ಬೀದರ್ ಸಮೀಪದ ಮಲಗಿ ಬೆಟ್ಟದ ಸಿದ್ಧೇಶ್ವರ ಕ್ಷೇತ್ರದಲ್ಲಿ ನಡೆದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮದಲ್ಲಿ ಬೇಮಳಖೇಡದ ರಾಜಶೇಖರ ಶಿವಾಚಾರ್ಯ ಅವರನ್ನು ಸನ್ಮಾನಿಸಲಾಯಿತು   

ಬೀದರ್: ಮಲಗಿ ಬೆಟ್ಟದ ಶ್ರೀ ಸಿದ್ಧೇಶ್ವರ ಕ್ಷೇತ್ರದ ಸರ್ವಾಂಗೀಣ ವಿಕಾಸಕ್ಕೆ ಸಂಕಲ್ಪ ತೊಡಲಾಗಿದೆ ಎಂದು ಬೇಮಳಖೇಡದರಾಜಶೇಖರ ಶಿವಾಚಾರ್ಯ ಹೇಳಿದರು.

ಇಲ್ಲಿಗೆ ಸಮೀಪದ ಮಲಗಿ ಬೆಟ್ಟದಲ್ಲಿ ನಡೆದ ಕಾರ್ತಿಕ ದೀಪೋತ್ಸವದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಭಕ್ತರ ಸಹಯೋಗದೊಂದಿಗೆ ಕ್ಷೇತ್ರದಲ್ಲಿ ಸಿಸಿ ರಸ್ತೆ, ವಿದ್ಯುತ್ ದೀಪ, ಮಹಾದ್ವಾರ ನಿರ್ಮಾಣ ಮೊದಲಾದ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಕ್ಷೇತ್ರದ ಸಮಗ್ರ ವಿಕಾಸಕ್ಕೆ ಬರುವ ದಿನಗಳಲ್ಲಿ ನಿಯೋಗದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ ಅವರನ್ನೂ ಭೇಟಿ ಮಾಡಲಾಗುವುದು ಎಂದು ತಿಳಿಸಿದರು.

ADVERTISEMENT

ಕ್ಷೇತ್ರದ ಅಭಿವೃದ್ಧಿಯ ಮೊದಲ ಹಂತವಾಗಿ ಪ್ರತಿ ಅಮಾವಾಸ್ಯೆಯಂದು ಸಿದ್ಧೇಶ್ವರ ದೇವರಿಗೆ ರುದ್ರಾಭಿಷೇಕ, ಅನ್ನದಾನ, ಭಜನೆ ಕಾರ್ಯಕ್ರಮಗಳನ್ನು ಆರಂಭಿಸಲಾಗುವುದು ಎಂದು ಹೇಳಿದರು.

ಬೀದರ್‌ನ ಕುಶಾಲರಾವ್ ಗೌರಶೆಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾರುತಿ, ಕಂಟೆಪ್ಪ ಭಂಗೂರೆ, ಮಾದಪ್ಪ ಭಂಗೂರೆ, ಬೀರಪ್ಪ, ಭೀಮಣ್ಣ, ಮಾರುತಿ, ಸಿದ್ಧು ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.