ADVERTISEMENT

ಬೆಳೆ ನಷ್ಟ: ಸೂಕ್ತ ಪರಿಹಾರಕ್ಕೆ ರೈತರ ಒತ್ತಾಯ

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ಮನವಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2023, 5:04 IST
Last Updated 21 ಮಾರ್ಚ್ 2023, 5:04 IST
ರಾಜ್ಯ ಸರ್ಕಾರ ಬೆಳೆ ನಷ್ಟ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿ ಬೀದರ್‌ನಲ್ಲಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮಪ್ಪ ಅಣದೂರೆ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು
ರಾಜ್ಯ ಸರ್ಕಾರ ಬೆಳೆ ನಷ್ಟ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿ ಬೀದರ್‌ನಲ್ಲಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮಪ್ಪ ಅಣದೂರೆ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು   

ಬೀದರ್‌: ಅಕಾಲಿಕ ಮಳೆಯಿಂದ ಕೃಷಿ ಹಾಗೂ ತೋಟಗಾರಿಕೆ ಬೆಳೆ ನಷ್ಟ ಅನುಭವಿಸಿದ ರೈತರಿಗೆ ತಕ್ಷಣ ಸೂಕ್ತ ಪರಿಹಾರ ಕೊಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕ ಆಗ್ರಹಿಸಿದೆ.

ಆಲಿಕಲ್ಲು ಮಳೆಗೆ ಜೋಳ, ಕುಸುಬೆ, ಗೋಧಿ, ತೋಟಗಾರಿಕೆ ಬೆಳೆಗಳಾದ ಮಾವು, ಕಲ್ಲಂಗಡಿ, ಬಾಳೆ, ತರಬೂಜ್‌ ಹಾಗೂ ತರಕಾರಿ ಬೆಳೆಗಳು ಸಂಪೂರ್ಣ ಹಾಳಾಗಿವೆ. ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮಪ್ಪ ಅಣದೂರೆ ಅವರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ನೆಟೆ ರೋಗದಿಂದ ತೊಗರಿ ಬೆಳೆ ಹಾನಿಯಾದರೂ ರೈತರಿಗೆ ಪರಿಹಾರ ದೊರಕಿಲ್ಲ. ಕಳೆದ ವರ್ಷ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಹೆಚ್ಚುವರಿಯಾಗಿ ಪ್ರತಿ ಕ್ವಿಂಟಲ್‌ಗೆ ₹ 50 ಕೊಡಿಸುವ ವ್ಯವಸ್ಥೆ ಮಾಡಿಸಬೇಕು. ₹ 5 ಲಕ್ಷದ ವರೆಗೆ ಶೂನ್ಯ ಬಡ್ಡಿಯಲ್ಲಿ ರೈತರಿಗೆ ಸಾಲ ಕೊಡಬೇಕು ಎಂದು ಮನವಿ ಮಾಡಿದರು.

ADVERTISEMENT

ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆಗಳಿಗೆ ಬೆಳೆ ವಿಮೆ ಕಟ್ಟಿರುವ ರೈತರಿಗೆ ವಿಮೆ ಹಣ ಕೊಡಬೇಕು. ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ರೈತ ವಿರೋಧಿ ಮೂರು ಕೃಷಿ ಮಸೂದೆಗಳನ್ನು ಹಿಂದಕ್ಕೆ ಪಡೆಯಬೇಕು. ಕಾಡು ಪ್ರಾಣಿಗಳಿಂದ ರೈತರ ಬೆಳೆ ನಷ್ಟ ಆಗುತ್ತಿರುವುದನ್ನು ತಪ್ಪಿಸಬೇಕು. ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ, ಶಂಕರೆಪ್ಪ ಪಾರಾ, ಬಾಬುರಾವ್ ಜೋಳದಾಬಕೆ, ಶೇಷರಾವ್ ಕಣಜಿ, ನಾಗಯ್ಯಾ ಸ್ವಾಮಿ, ಸುಭಾಷ ರಗಟೆ, ಪ್ರಕಾಶ ಬವಗೆ, ಸತೀಶ, ಲಕ್ಷ್ಮಣರಾವ್, ಪ್ರವೀಣ, ನಾಗಶೆಟ್ಟೆಪ್ಪ ಹಾಗೂ ಮಲ್ಲಿಕಾರ್ಜುನ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.