ADVERTISEMENT

ಔರಾದ್: ಒಳ ಮೀಸಲು ಶಿಫಾರಸು ವಿರೋಧಿಸಿ ಪ್ರತಿಭಟನೆ

ಔರಾದ್ ಪಟ್ಟಣದಲ್ಲಿ ಬಂಜಾರ ಸಮುದಾಯದವರಿಂದ ಪ್ರತಿಭಟನಾ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2023, 5:39 IST
Last Updated 29 ಮಾರ್ಚ್ 2023, 5:39 IST
ಔರಾದ್ ಪಟ್ಟಣದಲ್ಲಿ ಬಂಜಾರ ಸಮಾಜದವರು ಪ್ರತಿಭಟನೆ ನಡೆಸಿದರು
ಔರಾದ್ ಪಟ್ಟಣದಲ್ಲಿ ಬಂಜಾರ ಸಮಾಜದವರು ಪ್ರತಿಭಟನೆ ನಡೆಸಿದರು   

ಔರಾದ್: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದನ್ನು ಖಂಡಿಸಿ ಬಂಜಾರ ಸಮಾಜದವರು ಸೋಮವಾರ ಇಲ್ಲಿ ಪ್ರತಿಭಟನೆ ನಡೆಸಿದರು.

ಗೋರ್ ಸೇನಾ ರಾಜ್ಯ ಘಟಕದ ಅಧ್ಯಕ್ಷ ಬಾಳಸಾಹೇಬ್ ರಾಠೋಡ್, ಚರಣಸಿಂಗ್ ರಾಠೋಡ್, ಉತ್ತಮ ಜಾಧವ, ಭೀಮರಾವ ರಾಠೋಡ್ ನೇತೃತ್ವದಲ್ಲಿ ಪಟ್ಟಣದ ಕನ್ನಡಾಂಬೆ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ನಡೆಸಿ ಸರ್ಕಾರದ ನಡೆಗೆ ಆಕ್ರೋಶ ಹೊರಹಾಕಿದರು.

ನಾವು ಮೊದಲಿನಿಂದಲೂ ಸದಾಶಿವ ಆಯೋಗದ ವರದಿ ಜಾರಿಗೆ ವಿರೋಧ ಮಾಡುತ್ತ ಬಂದಿದ್ದೇವೆ. ಆದರೂ ರಾಜ್ಯ ಸರ್ಕಾರ ತರಾ ತುರಿಯಿಂದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಶಿಫಾರಸು ಮಾಡಿದೆ.

ADVERTISEMENT

ಇದರಿಂದ ಬಂಜಾರ, ಭೋವಿ, ಕೊರಚ, ಕೊರಮ ಸೇರಿ ಇತರೆ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಪ್ರತಿಭಟನಾ ನಿರತರು ಆಕ್ರೋಶ ಹೊರ ಹಾಕಿದರು.

ಸರ್ಕಾರ ಕೂಡಲೇ ಈ ನಿರ್ಣಯ ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಬಂಜಾರ ಸಮಾಜ ರಾಜ್ಯದಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡಲಿದೆ. ಈಗ ಬರುವ ವಿಧಾನಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿದರು.

ಸ್ಥಳಕ್ಕೆ ಆಗಮಿಸಿದ ಗ್ರೇಡ್-2 ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.