ADVERTISEMENT

ಸಂವಿಧಾನ ಸಂರಕ್ಷಣಾ ಸಮಿತಿಯಿಂದ ಪ್ರತಿಭಟನೆ

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಘಟನೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2022, 15:28 IST
Last Updated 19 ಆಗಸ್ಟ್ 2022, 15:28 IST
ಕೊಡಗಿನಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ಖಂಡಿಸಿ ಸಂವಿಧಾನ ಸಂರಕ್ಷಣಾ ಸಮಿತಿಯ ಕಾರ್ಯಕರ್ತರು ಬೀದರ್‌ನಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು
ಕೊಡಗಿನಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ಖಂಡಿಸಿ ಸಂವಿಧಾನ ಸಂರಕ್ಷಣಾ ಸಮಿತಿಯ ಕಾರ್ಯಕರ್ತರು ಬೀದರ್‌ನಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು   

ಬೀದರ್: ಕೊಡಗಿನಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ಖಂಡಿಸಿ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.


ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಕಾರ್ಯಕರ್ತರು ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.


ಸಿದ್ದರಾಮಯ್ಯ ಅವರ ಕಾರಿನ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು. ಭದ್ರತೆ ಲೋಪದ ಹೊಣೆ ಹೊತ್ತು ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡಲು ರಾಜ್ಯಪಾಲರು ಕ್ರಮ ಕೈಗೊಳ್ಳಬೇಕು ಎಂದು ಬೇಡಿಕೆ ಮಂಡಿಸಿದರು.

ADVERTISEMENT


ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಮೃತರಾವ್ ಚಿಮಕೋಡೆ, ಬಾಬುರಾವ್ ಪಾಸ್ವಾನ್, ಬಸವರಾಜ ಮಾಳಗೆ, ಮಾಳಪ್ಪ ಅಡಸಾರೆ, ಜಾನ್ ವೆಸ್ಲಿ, ಆಶೋಕ ಮಾಳಗೆ, ತುಕಾರಾಮ ಚಿಮಕೋಡ್, ಗೋರ್ವಧನ ರಾಠೋಡ್, ಬಾಬು ಅಲ್ಲೂರೆ, ಲಿಂಗಬೀರ ದೇವರು, ಶಂಕರ ದೊಡ್ಡಿ, ಕುಶಾಲ ಹಾಸಗೊಂಡ್, ಹಸನ ಪಿ, ಸಚಿನ್ ಮಲ್ಕಾಪುರ, ಮಲ್ಲಿಕಾರ್ಜುನ ಬಿರಾದಾರ, ಸಂಜಯ ಜಾಗೀರದಾರ್, ಮುಕೇಶ, ಲೋಕೇಶ, ಕುಮಾರ ನಿಜಾಂಪುರ, ಹಣಮಂತ ಮಲ್ಕಾಪುರ, ತಿಪ್ಪಣ್ಣ, ರಮೇಶ ಚಿಮಕೋಡ್, ಜಾಲೇಂದ್ರ ಮಾಳೆಗಾಂವ್, ಸಂತೋಷ ಜೋಳದಾಪಕೆ, ಓಂಕಾರ ಗಾದಗಿ, ಸಿದ್ದು, ಶ್ರೀಮಂತ, ಬಚ್ಚನ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.