ADVERTISEMENT

ಹಿಂದೂ ಬ್ರಿಗೇಡ್‍ನಿಂದ ಪ್ರತಿಭಟನೆ

ಡ್ರಗ್ಸ್ ದಂದೆ: ದೇಶದ್ರೋಹ ಪ್ರಕರಣ ದಾಖಲಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2020, 16:16 IST
Last Updated 15 ಸೆಪ್ಟೆಂಬರ್ 2020, 16:16 IST
ರಾಜ್ಯದಲ್ಲಿ ಡ್ರಗ್ಸ್ ಜಾಲದಲ್ಲಿ ತೊಡಗಿಸಿಕೊಂಡವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಬೀದರ್‍ನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಬ್ರಿಗೇಡ್ ಜಾಗೃತಿ ಸಂಘದ ಪದಾಧಿಕಾರಿಗಳು ಘೋಷಣೆ ಕೂಗಿದರು
ರಾಜ್ಯದಲ್ಲಿ ಡ್ರಗ್ಸ್ ಜಾಲದಲ್ಲಿ ತೊಡಗಿಸಿಕೊಂಡವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಬೀದರ್‍ನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಬ್ರಿಗೇಡ್ ಜಾಗೃತಿ ಸಂಘದ ಪದಾಧಿಕಾರಿಗಳು ಘೋಷಣೆ ಕೂಗಿದರು   

ಬೀದರ್: ರಾಜ್ಯದಲ್ಲಿ ಡ್ರಗ್ಸ್ ದಂದೆಯಲ್ಲಿ ತೊಡಗಿಕೊಂಡವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಹಿಂದೂ ಬ್ರಿಗೇಡ್ ಜಾಗೃತಿ ಸಂಘವು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.

ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಡ್ರಗ್ಸ್ ಜಾಲದವರು ಯುವಕರು ಹಾಗೂ ವಿದ್ಯಾರ್ಥಿಗಳು ಡ್ರಗ್ಸ್ ದಾಸರಾಗುವಂತೆ ಮಾಡುತ್ತಿದ್ದಾರೆ. ಸರ್ಕಾರ, ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಿ, ಇದರಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕೋಡಗಿ, ಉಪಾಧ್ಯಕ್ಷ ಸೀನು ಮಾಶೆಟ್ಟಿ, ಖಜಾಂಚಿ ಸಂತೋಷ ಭಂಡೆ ನೇತೃತ್ವ ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.