ADVERTISEMENT

ಕೃಷಿ ಕಾಯ್ದೆ ರದ್ದತಿಗೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2021, 13:25 IST
Last Updated 2 ಫೆಬ್ರುವರಿ 2021, 13:25 IST
ಹೊಸ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ಆಗ್ರಹಿಸಿ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಬೀದರ್‌ನ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು
ಹೊಸ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ಆಗ್ರಹಿಸಿ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಬೀದರ್‌ನ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು   

ಬೀದರ್: ಕೇಂದ್ರ ಸರ್ಕಾರ ಹೊಸ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ರಾಷ್ಟ್ರಪತಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಗೋಹತ್ಯೆ ನಿಷೇಧ ಕಾಯ್ದೆ ರದ್ದುಪಡಿಸಬೇಕು. ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭಿಸಬೇಕು. ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಬೇಕು. ಪಿಟಿಸಿಎಲ್ ಕಾಯ್ದೆ ತಿದ್ದುಪಡಿ ಮಾಡಬೇಕು ಎಂದು ಆಗ್ರಹಿಸಿದರು.

ADVERTISEMENT

ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಅಂಕುಶ ಗೋಖಲೆ, ಬಿ. ವಿಠ್ಠಲ ನಾಯಕ್, ದತ್ತು ಸೂರ್ಯವಂಶಿ, ಜಿಲ್ಲಾ ಘಟಕದ ಅಧ್ಯಕ್ಷ ಎಂ.ಡಿ. ಜಮೀಲ್ ಅಹಮ್ಮದ್ ಖಾನ್, ಅಶೋಕ ಮಂಠಾಳಕರ್, ತಿಪ್ಪಣ್ಣ ಎಸ್. ವಾಲಿ, ಸೈಯದ್ ವಾಹೇದ್ ಲಖನ್, ಪ್ರಕಾಶ ಕೋಟೆ, ಜಾಫರ್ ಖುರೇಶಿ, ಯೋಹಾನ್ ಡಿಸೋಜಾ, ಗೋವಿಂದ ಭೋಸ್ಲೆ, ವೈಜಿನಾಥ ಸಿಂಧೆ, ಸತ್ಯದೀಪ ಎಚ್., ಶಾಹೀನ್ ಪಟೇಲ್, ಹುಲೆಪ್ಪ ಬಾಳೂರ, ಮಾರುತಿ ಕಾಂಬಳೆ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.