ADVERTISEMENT

ಬಸವಕಲ್ಯಾಣ: ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ

ನಕಲಿ ಪ್ರಮಾಣಪತ್ರ ನೀಡಿದ ಅಧಿಕಾರಿಗಳು, ಪಡೆದವರ ವಿರುದ್ಧ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಮೇ 2022, 4:16 IST
Last Updated 21 ಮೇ 2022, 4:16 IST
ಬಸವಕಲ್ಯಾಣದಲ್ಲಿ ಶುಕ್ರವಾರ ಅಖಿಲ ಕರ್ನಾಟಕ ವಾಲ್ಮೀಕಿ ಬೇಡರ ನಾಯಕ ಮಹಾಸಭಾದಿಂದ ಮನವಿ ಸಲ್ಲಿಸಲಾಯಿತು
ಬಸವಕಲ್ಯಾಣದಲ್ಲಿ ಶುಕ್ರವಾರ ಅಖಿಲ ಕರ್ನಾಟಕ ವಾಲ್ಮೀಕಿ ಬೇಡರ ನಾಯಕ ಮಹಾಸಭಾದಿಂದ ಮನವಿ ಸಲ್ಲಿಸಲಾಯಿತು   

ಬಸವಕಲ್ಯಾಣ: ‘ಪರಿಶಿಷ್ಟ ಜಾತಿಗೆ ಶೇ 17 ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ 7.5 ರಷ್ಟು ಮೀಸಲಾತಿ ಹೆಚ್ಚಿಸಬೇಕು’ ಎಂದು ಅಗ್ರಹಿಸಿ ಅಖಿಲ ಕರ್ನಾಟಕ ವಾಲ್ಮೀಕಿ ಬೇಡರ, ನಾಯಕ ಮಹಾಸಭಾದಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಮಹಾಸಭಾದ ಕಾರ್ಯ ಕರ್ತರು,‘ಮೀಸಲಾತಿ ಹೆಚ್ಚಿಸುವುದಾಗಿ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದರು. ಆದರೂ, ಇದುವರೆಗೆ ಯಾರೂ ಏನೂ ಕ್ರಮ ತೆಗೆದುಕೊಂಡಿಲ್ಲ. ರಾಜನಹಳ್ಳಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಯವರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡ ಅಹೋರಾತ್ರಿ ಧರಣಿ 100ನೇ ದಿನಕ್ಕೆ‌ ಕಾಲಿಟ್ಟಿದೆ. ಆದರೂ, ಯಾರೂ ಲಕ್ಷ್ಯ ನೀಡುತ್ತಿಲ್ಲ. ಆದ್ದರಿಂದ ರಾಜ್ಯದಾದ್ಯಂತ ಏಕಕಾಲಕ್ಕೆ ಪ್ರತಿಭಟನೆ ನಡೆಸಲಾಗುತ್ತಿದೆ’ ಎಂದರು.

ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಹೆಸರಲ್ಲಿ ಪ್ರಮಾಣಪತ್ರ ಪಡೆಯುವವರು ಹಾಗೂ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ವಾಲ್ಮೀಕಿ ಸಮಾಜ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದಶರಥ ಜಮಾದಾರ ಬಟಗೇರಾವಾಡಿ, ತಾಲ್ಲೂಕು ಘಟಕದ ಅಧ್ಯಕ್ಷ ದಿಲೀಪ್ ಜಮಾದಾರ, ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಜಮಾದಾರ, ಭೀಮ್ ಆರ್ಮಿ ಅಧ್ಯಕ್ಷ ಚೇತನ ಕಾಡೆ, ಬಿಎಸ್‌ಪಿ ತಾಲ್ಲೂಕು ಘಟಕದ ಅಧ್ಯಕ್ಷ ಮಾರುತಿ ಕಾಂಬಳೆ, ದತ್ತು ಸುಂಠಾಣೆ, ಸುಭಾಷ ಜಮಾದಾರ, ಬಾಬುರಾವ್ ಜಾಜನಮುಗಳಿ, ಬಲಭೀಮಶಾ ಜಮಾದಾರ, ಮಹಾದೇವ, ಚಂದ್ರಕಾಂತ, ದತ್ತು, ಲಕ್ಷ್ಮಣ ಭೋಸ್ಲೆ ಹಾಗೂ ಯಲ್ಲಾಲಿಂಗ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.