ADVERTISEMENT

ಹುಮನಾಬಾದ್ | ಶಿವಾಜಿ ಭಾವಚಿತ್ರಕ್ಕೆ ಮಸಿ ಬಳಿದು ಅಪಮಾನ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2025, 16:40 IST
Last Updated 2 ಆಗಸ್ಟ್ 2025, 16:40 IST
<div class="paragraphs"><p>ಶಿವಾಜಿ ಭಾವಚಿತ್ರಕ್ಕೆ ಮಸಿ ಬಳಿದು ಅವಮಾನ</p></div>

ಶಿವಾಜಿ ಭಾವಚಿತ್ರಕ್ಕೆ ಮಸಿ ಬಳಿದು ಅವಮಾನ

   

ಹುಮನಾಬಾದ್ (ಬೀದರ್ ಜಿಲ್ಲೆ): ತಾಲ್ಲೂಕಿನ ದುಬಲಗುಂಡಿ ಗ್ರಾಮದ ವೃತ್ತದಲ್ಲಿರುವ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಮಸಿ ಬಳಿದು ಅವಮಾನ ಮಾಡಿರುವುದನ್ನು ಖಂಡಿಸಿ ಮರಾಠ ಸಮುದಾಯದವರು ಶನಿವಾರ ರಾತ್ರಿ ಪ್ರತಿಭಟನೆ ನಡೆಸಿದರು.

ಕೃತ್ಯ ಎಸಗಿದವರ ಬಂಧನಕ್ಕೆ ಆಗ್ರಹಿಸಿದರು. ಸ್ಥಳಕ್ಕಾಗಮಿಸಿದ ಪೊಲೀಸರು, ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಶ್ವಾಸನೆ ನೀಡಿದ ನಂತರ ಪ್ರತಿಭಟನೆ ಕೈಬಿಟ್ಟರು.

ADVERTISEMENT

ಗ್ರಾಮದ ಮುಖಂಡ ಅನಿಲ್ ಪಸರ್ಗಿ ಮಾತನಾಡಿ, ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಶಿವಾಜಿ ಮಹಾರಾಜರ ವೃತ್ತದಲ್ಲಿ ಶಿವಾಜಿ ಮಹಾರಾಜರು, ಅಂಬಾ ಭವಾನಿ ಹಾಗೂ ಜೀಜಾಮಾತಾ ಅವರ ಭಾವಚಿತ್ರಕ್ಕೆ ಮಸಿ ಬಳಿದಿದ್ದಾರೆ. ದುಷ್ಕೃತ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದರು.

ಸಿಪಿಐ ಗುರು ಪಾಟೀಲ , ಹಳ್ಳಿಖೇಡ್ (ಬಿ) ಠಾಣೆಯ ಪಿಎಸ್ಐ ವಿಜಯಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.