ADVERTISEMENT

ಕಪ್ಪು ಪಟ್ಟಿ ಧರಿಸಿ ಗುತ್ತಿಗೆ ನೌಕರರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಮೇ 2020, 16:12 IST
Last Updated 13 ಮೇ 2020, 16:12 IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಬೀದರ್‌ನಲ್ಲಿ ಬುಧವಾರ ಕೈಗೆ ಕಪ್ಪುಪಟ್ಟಿ ಧರಿಸಿ ಕಾರ್ಯ ನಿರ್ವಹಿಸುವ ಮೂಲಕ ಪ್ರತಿಭಟನೆ ನಡೆಸಿದರು
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಬೀದರ್‌ನಲ್ಲಿ ಬುಧವಾರ ಕೈಗೆ ಕಪ್ಪುಪಟ್ಟಿ ಧರಿಸಿ ಕಾರ್ಯ ನಿರ್ವಹಿಸುವ ಮೂಲಕ ಪ್ರತಿಭಟನೆ ನಡೆಸಿದರು   

ಬೀದರ್: ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಬೇಕು. ಸೇವೆ ಕಾಯಂಗೊಳಿಸಬೇಕು ಎನ್ನುವುದು ಸೇರಿದಂತೆ 14 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರು ಬುಧವಾರ ಕೈಗೆ ಕಪ್ಪು ಪಟ್ಟಿ ಧರಿಸಿ ಕಾರ್ಯ ನಿರ್ವಹಿಸುವ ಮೂಲಕ ಪ್ರತಿಭಟನೆ ನಡೆಸಿದರು.

ಇಲ್ಲಿಯ ಕುಂಬಾರವಾಡದ ಪ್ರಾಥಮಿಕ ಆರೋಗ್ಯ ಕೇಂದ್ರದ ನೌಕರರು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘದ ಉಮೇಶ ಬಿರಾದಾರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಹರಿಯಾಣ ಮಾದರಿಯಲ್ಲಿ ಎಚ್.ಆರ್. ನಿಯಮ ರಚಿಸಬೇಕು. ಏಕರೂಪದ ವೇತನ ಕೊಡಬೇಕು. ವಿಮೆ ಸೌಲಭ್ಯ ಕಲ್ಪಿಸಬೇಕು ಎಂದು ಉಮೇಶ ಒತ್ತಾಯಿಸಿದರು.

ADVERTISEMENT

ಮೇ 21 ರವರೆಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಮಾಡಲಾಗುವುದು. ಸರ್ಕಾರ ಬೇಡಿಕೆಗೆ ಸ್ಪಂದಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಎಲಿಜಬೇತ್, ಮರೆಮ್ಮ, ಶೇಖ್ ಸಿಜಾರ್, ರೇಷ್ಮಾ, ವಿಕ್ರಮ್, ಸುಹಾಸಿನಿ, ಹೇಮಾವತಿ, ಕಾವೇರಿ, ಆಯೇಶಾ ಬೇಗಂ, ಜಗದೇವಿ, ಸುನೀಲ್ ಮೊದಲಾದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.