ADVERTISEMENT

ಬೀದರ್‌: ಶಿವಾಜಿ, ರಾಯಣ್ಣ ಪ್ರತಿಮೆಗೆ ಅವಮಾನ, ಪ್ರತಿಭಟನೆ

protest

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2021, 15:35 IST
Last Updated 21 ಡಿಸೆಂಬರ್ 2021, 15:35 IST
ಕಿಡಿಗೇಡಿಗಳು ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಅವಮಾನಗೊಳಿಸಿದ್ದನ್ನು ಖಂಡಿಸಿ ಬೀದರ್‌ನಲ್ಲಿ ಮಂಗಳವಾರ ಮರಾಠಾ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು
ಕಿಡಿಗೇಡಿಗಳು ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಅವಮಾನಗೊಳಿಸಿದ್ದನ್ನು ಖಂಡಿಸಿ ಬೀದರ್‌ನಲ್ಲಿ ಮಂಗಳವಾರ ಮರಾಠಾ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು   

ಬೀದರ್‌: ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಅವಮಾನ ಮಾಡಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸಕಲ ಮರಾಠಾ ಸಮಾಜ ಹಾಗೂ ಛತ್ರಪತಿ ಶಿವಾಜಿ ಮಹಾರಾಜ ಜನತಾ ಸಂಘದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕಾರ್ಯಕರ್ತರು ಶಿವಾಜಿ ವೃತ್ತದ ಬಳಿ ಜಮಾಯಿಸಿ ಕಿಡಿಗೇಡಿಗಳ ವಿರುದ್ಧ ಘೋಷಣೆ ಕೂಗಿದರು. ನಂತರ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಮನವಿಪತ್ರವನ್ನು ಸಲ್ಲಿಸಿದರು.

ಮಹಾಪುರುಷರಿಗೆ ಅವಮಾನ ಮಾಡುವ ಮೂಲಕ ದೇಶಕ್ಕೆ ದ್ರೋಹ ಬಗೆದಿದ್ದಾರೆ. ತಕ್ಷಣ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಮರಾಠಾ ಕ್ರಾಂತಿ ಯುವ ಮೋರ್ಚಾದ ಸಂಯೋಜಕ ವೆಂಟರಾವ್‌ ಮಹಿಂದೆ, ಛತ್ರಪತಿ ಶಿವಾಜಿ ಮಹಾರಾಜ ಜನತಾ ಸಂಘದ ಸುದೀಪ ಪಾಟೀಲ, ಮರಾಠಾ ಸೇವಾ ಸಂಘದ ಅಧ್ಯಕ್ಷ ರಂಜೀತ್‌ ಪಾಟೀಲ, ದಿಗಂಬರ್ ಮಾನಕರಿ, ಸಂಭಾಜಿ ಬ್ರಿಗೇಡ್‌ನ ಅಜಯ ತ್ರಿಮುಕೆ, ಕರ್ನಾಟಕ ಕ್ಷತ್ರೀಯ ಒಕ್ಕೂಟದ ಅಶೋಕ ಚವಾಣ್‌ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.