ADVERTISEMENT

ಲೇಖಕಗೆ ಮಸಿ: ವಕೀಲೆ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2021, 15:06 IST
Last Updated 7 ಫೆಬ್ರುವರಿ 2021, 15:06 IST
ಲೇಖಕ ಪ್ರೊ. ಕೆ.ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟವು ಬೀದರ್‌ನಲ್ಲಿ ಶನಿವಾರ ಪ್ರತಿಭಟನೆ ನಡೆಸಿತು
ಲೇಖಕ ಪ್ರೊ. ಕೆ.ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟವು ಬೀದರ್‌ನಲ್ಲಿ ಶನಿವಾರ ಪ್ರತಿಭಟನೆ ನಡೆಸಿತು   

ಬೀದರ್: ಲೇಖಕ ಪ್ರೊ. ಕೆ. ಎಸ್. ಭಗವಾನ್ ಅವರ ಮುಖಕ್ಕೆ ಮಸಿ ಬಳಿದ ವಕೀಲೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ವಕೀಲೆಯನ್ನು ರಾಜ್ಯದಿಂದ ಗಡಿಪಾರು ಮಾಡಬೇಕು. ಕೆ.ಎಸ್. ಭಗವಾನ್ ಅವರಿಗೆ ಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಒಕ್ಕೂಟದ ಅಧ್ಯಕ್ಷ ಬಾಬುರಾವ್ ಪಾಸ್ವಾನ್, ಮುಖಂಡರಾದ ಬಾಬುರಾವ್ ಹೊನ್ನಾ, ಕಲ್ಯಾಣರಾವ್ ಭೋಸ್ಲೆ, ಶ್ರೀಪತರಾವ್ ದೀನೆ, ಶಿವಕುಮಾರ ನೀಲಿಕಟ್ಟಿ, ಅರುಣ ಪಟೇಲ್, ಅಶೋಕ ಮಾಳಗೆ, ಅರುಣ ಕುದರೆ, ಶಾಲಿವಾನ್ ಬಡಿಗೇರ, ಆರ್.ಪಿ. ರಾಜಾ, ಅಂಬಾದಾಸ ಗಾಯಕವಾಡ, ಮಲ್ಲಿಕಾರ್ಜುನ ಮೋಳಕೇರೆ, ಅವಿನಾಶ ದೀನೆ, ರಮೇಶ ಪಾಸ್ವಾನ್, ಸುನೀಲ್ ಬಚ್ಚನ್ ಮೊದಲಾದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.