ADVERTISEMENT

ಬೀದರ್: ಬಡಾವಣೆಗಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 14 ಜುಲೈ 2021, 16:37 IST
Last Updated 14 ಜುಲೈ 2021, 16:37 IST
ಬೀದರ್ ನಗರದ ಬಡಾವಣೆಗಳಿಗೆ ಮೂಲಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ ಸಾರಥ್ಯದಲ್ಲಿ)ಯ ಕಾರ್ಯಕರ್ತರು ಬೀದರ್‍ನಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು
ಬೀದರ್ ನಗರದ ಬಡಾವಣೆಗಳಿಗೆ ಮೂಲಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ ಸಾರಥ್ಯದಲ್ಲಿ)ಯ ಕಾರ್ಯಕರ್ತರು ಬೀದರ್‍ನಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು   

ಬೀದರ್: ನಗರದ ಬಡಾವಣೆಗಳಿಗೆ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ ಸಾರಥ್ಯದಲ್ಲಿ) ಒತ್ತಾಯಿಸಿದೆ.

ವೇದಿಕೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಈ ಕುರಿತು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಅನೇಕ ಬಡಾವಣೆಗಳಲ್ಲಿ ರಸ್ತೆ, ಚರಂಡಿ, ದಾರಿ ದೀಪಗಳ ವ್ಯವಸ್ಥೆ ಇಲ್ಲದ ಕಾರಣ ನಾಗರಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಹೇಳಿದರು.

ADVERTISEMENT

ಕೆಲ ಕಡೆ ಚರಂಡಿಗಳು ಇಲ್ಲದೇ ಇರುವುದರಿಂದ ಮಳೆ ನೀರು ಮನೆಗಳಿಗೆ ನುಗ್ಗುತ್ತಿದೆ. ರಸ್ತೆಗಳಲ್ಲಿ ತಗ್ಗು ದಿನ್ನೆಗಳು ನಿರ್ಮಾಣಗೊಂಡು, ಸಂಚಾರಕ್ಕೆ ತೊಂದರೆಯಾಗುತ್ತಿದೆ. ಕೂಡಲೇ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.

ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಪೀಟರ್ ಚಿಟಗುಪ್ಪಾ, ಉಪಾಧ್ಯಕ್ಷರಾದ ಸ್ವಾಮಿದಾಸ ಸೋರಳ್ಳಿಕರ್, ಸೈಮನ್ ಚಿಲ್ಲರ್ಗಿ, ಸಹ ಕಾರ್ಯದರ್ಶಿ ಗುರುರಾಜ ಮೇತ್ರೆ, ಹುಮನಾಬಾದ್ ತಾಲ್ಲೂಕು ಘಟಕದ ಅಧ್ಯಕ್ಷ ಭಾಸ್ಕರ್ ಹಲಗೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.