ADVERTISEMENT

‘ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ನೀಡಿ’

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2020, 16:53 IST
Last Updated 26 ಅಕ್ಟೋಬರ್ 2020, 16:53 IST
ಬೀದರ್‌ನಲ್ಲಿ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರಿಗೆ ಮನವಿಪತ್ರ ಸಲ್ಲಿಸಿದರು
ಬೀದರ್‌ನಲ್ಲಿ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರಿಗೆ ಮನವಿಪತ್ರ ಸಲ್ಲಿಸಿದರು   

ಬೀದರ್: ಕಾರಂಜಾ ನೀರಾವರಿ ಯೋಜನೆ ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಎಚ್ಚರಿಸಿದೆ.

ಸಮಿತಿಯ ಪದಾಧಿಕಾರಿಗಳು ನಗರದಲ್ಲಿ ಈಚೆಗೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರಿಗೆ ಈ ಕುರಿತು ಮನವಿಪತ್ರ ಸಲ್ಲಿಸಿದರು.

ತಿಂಗಳ ಒಳಗೆ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಹೇಳಿದರು.

ADVERTISEMENT

ಜಿಲ್ಲೆಯಲ್ಲಿ ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.

ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ, ಪ್ರಧಾನ ಕಾರ್ಯದರ್ಶಿ ನಾಗಶೆಟ್ಟಿ ಹಚ್ಚಿ, ನಿರ್ದೇಶಕ ವೀರಭದ್ರಪ್ಪ ಉಪ್ಪಿನ್, ಬಸವರಾಜ ಮೂಲಗೆ, ಚಂದ್ರಶೇಖರ, ಸುಧಾಕರರಾವ್, ಮಹಮ್ಮದ್ ಯುಸೂಫ್, ಪ್ರಭುರಾವ್ ಚಾಮಾ, ರಾಜಶೇಖರ, ಅಣ್ಣೆಪ್ಪ ಸಿರ್ಸೆ, ಮಲಶೆಟ್ಟೆಪ್ಪ, ಬಾಲಾಜಿ, ರಮೇಶ ರೆಡ್ಡಿ, ಭೀಮರಾವ್ ಭತಮುರ್ಗೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.