
ಮನ್ನಳ್ಳಿ(ಜನವಾಡ): ಎಚ್‍ಐವಿ ಸೋಂಕು ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅವಶ್ಯಕವಾಗಿದೆ ಎಂದು ಬ್ರಿಮ್ಸ್ ಆಸ್ಪತ್ರೆಯ ಐಸಿಟಿಸಿ ವಿಭಾಗದ ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿ ಅರವಿಂದ ಕುಲಕರ್ಣಿ ಹೇಳಿದರು.
ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೋಸೈಟಿ ಹಾಗೂ ಲಾಲ್ ಬಹಾದ್ದೂರ್ ಶಿಕ್ಷಣ ಸಂಸ್ಥೆ ವತಿಯಿಂದ ಮಂಗಳವಾರ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಲ್ಲ ಆಸ್ಪತ್ರೆಗಳಲ್ಲೂ ಎಚ್‍ಐವಿ ಸೋಂಕಿತರಿಗೆ ಉಚಿತ ಚಿಕಿತ್ಸೆ ಸೌಲಭ್ಯ ಇದೆ. ಎಚ್‍ಐವಿ ಸೋಂಕಿನ ಬಗ್ಗೆ ಸಾರ್ವಜನಿಕರಲ್ಲಿ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬೇಕಿದೆ ಎಂದು ಹೇಳಿದರು.
ಲಾಲ್ ಬಹಾದ್ದೂರ್ ಶಿಕ್ಷಣ ಸಂಸ್ಥೆಯ ಮೇಲ್ವಿಚಾರಕ ಆನಂದ ಪೌಲ್, ಶುಶ್ರೂಷಕಿ ಸುವರ್ಣಾ, ಆಶಾ ಕಾರ್ಯಕರ್ತೆಯರಾದ ಲಕ್ಷ್ಮಿ, ಭಾರತಿ, ಸುಲೋಚನಾ, ಜಯಾ, ಚಂದ್ರಕಲಾ, ಹುಸೇನ್ ಬೇಗಂ, ತಸ್ಲೀಮ್, ಮಹೆಬೂಬ್ ಬಿ., ಜಗದೇವಿ ಇದ್ದರು. ಮಹಾದೇವಿ ನಿರೂಪಿಸಿದರು. ಭಾಗ್ಯಲಕ್ಷ್ಮಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.