ಭಾಲ್ಕಿ: ಪಟ್ಟಣದ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಡಿಯಲ್ಲಿ ನಡೆಯುತ್ತಿರುವ ಸಂಗಮೇಶ್ವರ ಪಿಯು ವಿಜ್ಞಾನ, ಕಲಾ ಕಾಲೇಜಿಗೆ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿದ್ದು, ಕಲಾ ವಿಭಾಗದಲ್ಲಿ ರಾಧಿಕಾ ಚಂದ್ರಕಾಂತ 545, ವಿಜ್ಞಾನ ವಿಭಾಗದಲ್ಲಿ ಪ್ರಣೀತಾ ಶ್ರೀಮಂತ 538 ಅಂಕ ಪಡೆದು ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ ಎಂದು ಶೈಕ್ಷಣಿಕ ಮಾರ್ಗದರ್ಶಕ ಬಸವರಾಜ ಮೊಳಕೀರೆ ತಿಳಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಬಿರಾದಾರ ಅನುಷ್ಕಾ 533, ನಿಟ್ಟೂರೆ ಸಮೃದ್ಧಿ 527, ಆದಿತ್ಯ ಧನಕೆ 525, ಶಿವಾನಂದ ಸಂಗಮೇಶ 516, ಸರಸ್ವತಿ ಶರಣಯ್ಯಾ 513, ಶಿವಲೀಲಾ ಶಂಕರ 513, ಪ್ರಾಚಿ ಚಲವಾ 513, ವೈಷ್ಣವಿ ಓಂಕಾರ 511 ಅಂಕ ಪಡೆದು ಅಗ್ರ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಕಾಲೇಜಿನ ಒಟ್ಟು ಫಲಿತಾಂಶ ಶೇ 95.71 ಆಗಿದೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ, ಆಡಳಿತಾಧಿಕಾರಿ ಮೋಹನರೆಡ್ಡಿ, ಸ್ಥಲೀಯ ಕಮಿಟಿ ಅಧ್ಯಕ್ಷ ಧನರಾಜ ಬಂಬುಳಗೆ, ಪ್ರಾಚಾರ್ಯ ಪ್ರವೀಣ ಹಿರೇಮಠ ಸೇರಿದಂತೆ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.