ADVERTISEMENT

‘ಬ್ರಿಮ್ಸ್‌’ಗೆ ಪಲ್ಸ್ ಆಕ್ಸಿಮೀಟರ್ ದೇಣಿಗೆ

​ಪ್ರಜಾವಾಣಿ ವಾರ್ತೆ
Published 6 ಮೇ 2021, 4:19 IST
Last Updated 6 ಮೇ 2021, 4:19 IST
ಬೀದರ್‌ನಲ್ಲಿ ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಪದಾಧಿಕಾರಿಗಳು ಬ್ರಿಮ್ಸ್ ಆಸ್ಪತ್ರೆ ಶಸ್ತ್ರಚಿಕಿತ್ಸಕ ಡಾ. ರತಿಕಾಂತ ಸ್ವಾಮಿ ಅವರಿಗೆ ಆಕ್ಸಿಮೀಟರ್‌ಗಳನ್ನು ದೇಣಿಗೆಯಾಗಿ ನೀಡಿದರು
ಬೀದರ್‌ನಲ್ಲಿ ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಪದಾಧಿಕಾರಿಗಳು ಬ್ರಿಮ್ಸ್ ಆಸ್ಪತ್ರೆ ಶಸ್ತ್ರಚಿಕಿತ್ಸಕ ಡಾ. ರತಿಕಾಂತ ಸ್ವಾಮಿ ಅವರಿಗೆ ಆಕ್ಸಿಮೀಟರ್‌ಗಳನ್ನು ದೇಣಿಗೆಯಾಗಿ ನೀಡಿದರು   

ಬೀದರ್: ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯು ಇಲ್ಲಿಯ ಬ್ರಿಮ್ಸ್ ಆಸ್ಪತ್ರೆಗೆ 20 ಪಲ್ಸ್ ಆಕ್ಸಿಮೀಟರ್ ದೇಣಿಗೆಯಾಗಿ ನೀಡಿದೆ.

ಕ್ಲಬ್ ಪದಾಧಿಕಾರಿಗಳು ಬುಧವಾರ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರತಿಕಾಂತ ಸ್ವಾಮಿ ಅವರಿಗೆ ಪಲ್ಸ್ ಆಕ್ಸಿಮೀಟರ್‌ಗಳನ್ನು ಹಸ್ತಾಂತರಿಸಿದರು.

‘ಕೊರೊನಾ ಸೋಂಕಿತರ ಆಮ್ಲಜನಕ ಪ್ರಮಾಣ ಹಾಗೂ ನಾಡಿ ಬಡಿತ ಅರಿಯಲು ನೆರವಾಗುವುದಕ್ಕಾಗಿ ಪಲ್ಸ್ ಆಕ್ಸಿಮೀಟರ್‌ಗಳನ್ನು ದೇಣಿಗೆ ರೂಪದಲ್ಲಿ ಕೊಡಲಾಗಿದೆ’ ಎಂದು ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯ ಅಧ್ಯಕ್ಷ ಸೂರ್ಯಕಾಂತ ರಾಮಶೆಟ್ಟಿ ತಿಳಿಸಿದರು.

ADVERTISEMENT

‘ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಕ್ಲಬ್ ಸಾರ್ವಜನಿಕರಿಗೆ ಉಪಕಾರಿ ಆಗುವಂತಹ ವಿವಿಧ ಕಾರ್ಯಗಳನ್ನು ಕೈಗೊಳ್ಳಲು ಉದ್ದೇಶಿಸಿದೆ’ ಎಂದು ಹೇಳಿದರು.

ಕ್ಲಬ್ ಕಾರ್ಯದರ್ಶಿ ಡಾ. ಕಪಿಲ್ ಪಾಟೀಲ, ಸದಸ್ಯ ಡಾ. ವಿವೇಕ ನಿಂಬೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.