
ಬೀದರ್: ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ನಗರದ ಗಾವಾನ್ ಚೌಕ್‌ನಲ್ಲಿರುವ ‘ಒಯಸ್ಟರ್ ಸ್ಕೂಲ್ ಆಫ್ ಎಕ್ಸ್‌ಲೆನ್ಸ್’ನಲ್ಲಿ ಭಾನುವಾರ ಮಗುವಿಗೆ ಲಸಿಕೆ ಹಾಕಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ನಮ್ಮ ರಾಷ್ಟ್ರದಲ್ಲಿ ಪೋಲಿಯೋ ಸಂಪೂರ್ಣ ನಿರ್ಮೂಲನೆ ಆಗಿದೆ. ಮತ್ತೆ ಪೋಲಿಯೋ ವೈರಸ್‍ನಿಂದ ಅಂಗವೈಕಲ್ಯಕ್ಕೆ ಒಳಗಾಗದಂತೆ ಮುನ್ನೆಚ್ಚರಿಕೆಯಾಗಿ ಜಿಲ್ಲೆಯ ಸಾರ್ವಜನಿಕರು ತಮ್ಮ ನವಜಾತ ಶಿಶುವಿನಿಂದ ಹಿಡಿದು 5 ವರ್ಷದೊಳಗಿನ ಮಕ್ಕಳಿಗೆ ಬೂತ್ ಮಟ್ಟದಲ್ಲಿ ಕರೆತಂದು ಕಡ್ಡಾಯವಾಗಿ ಲಸಿಕೆ ಹಾಕಿಸಬೇಕೆಂದು ಹೇಳಿದರು.
ಡಿ.22ರಿಂದ 24ರ ವರೆಗೆ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಮನೆ ಮನೆಗಳಿಗೆ ಭೇಟಿ ಕೊಟ್ಟು ಬಿಟ್ಟು ಹೋದ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುತ್ತಾರೆ. ಆರೋಗ್ಯವಂತ ಸಮಾಜ ನಿರ್ಮಾಣವಾಗಬೇಕಾದರೆ ಮಕ್ಕಳು ಆರೋಗ್ಯವಂತರಾಗಿರಬೇಕು. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕಾರ ನೀಡಬೇಕು ಎಂದರು.
ಬೀದರ್ ಮಹಾನಗರ ಪಾಲಿಕೆಯ ಅಧ್ಯಕ್ಷ ಮುಹಮ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ರಾಜ್ಯ ಪಲ್ಸ್ ಪೋಲಿಯೋ ನೋಡಲ್ ಅಧಿಕಾರಿ ಡಾ. ಇಂದುಮತಿ ಕಾಮಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ ನೀರಗುಡೆ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಶಿವಶಂಕರ ಭತಮುರ್ಗೆ, ಒಯಸ್ಟರ್ ಶಾಲೆಯ ಅಧ್ಯಕ್ಷ ಮುಹಮ್ಮದ್ ಮಂಜೂರ್ ಇರ್ಫಾನ್, ಡಾ. ರಾಜಶೇಖರ ಪಾಟೀಲ, ಡಾ. ಶಂಕ್ರೆಪ್ಪ ಬೊಮ್ಮಾ, ಡಾ. ಅನೀಲ ಚಿಂತಾಮಣಿ, ಡಾ. ದಿಲೀಪ್ ಡೋಂಗ್ರೆ, ಡಾ. ಕಿರಣ ಪಾಟೀಲ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಸಂಗರೆಡ್ಡಿ, ನೂರು ಹಾಸಿಗೆ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಮುಹಮ್ಮದ್ ಸೋಹೆಲ್, ಉಮೇಶ ಬಿರಾದಾರ, ಲೋಕೇಶ ಸಲಗರ, ಶಿವಶಂಕರ ಬೇಮಳಗಿ, ದೇವಿದಾಸ, ತಾರಾದೇವಿ, ಅಜಯ ಪಾಟೀಲ ಇದ್ದರು. ಟಿ.ಎಂ.ಮಚ್ಚೆ ಕಾರ್ಯಕ್ರಮ ನಡೆಸಿಕೊಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.