ಹುಮನಾಬಾದ್: ‘ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ’ ಎಂದು ಪುಟ್ಟರಾಜ ಹನುಮಂತಪ್ಪ ನಂದಿ ತಿಳಿಸಿದರು.
ಪಟ್ಟಣದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿಯಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಮಾನಸಂದ್ರ ಮುನಿಯಪ್ಪ ಅವರು ಬೀದರ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ನನ್ನ ಹೆಸರು ಘೋಷಣೆ ಮಾಡಿದ್ದಾರೆ’ ಎಂದರು.
‘ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ದಲಿತ, ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯದ ಜನರಿಗೆ ಅನೇಕ ವರ್ಷಗಳಿಂದ ಅನ್ಯಾಯ ಮಾಡಿಕೊಂಡು ಬರುತ್ತೇವೆ. ಹೀಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯಾರೂಬ್ಬರು ಸಹ ಈ ಎರಡು ಪಕ್ಷಕ್ಕೆ ನಿಮ್ಮ ಮತ ನೀಡಬೇಡಿ. ಹಿಂದುಳಿದ ವರ್ಗಗಳ ಸಮುದಾಯದ ಜನರು ರಾಜಕೀಯವಾಗಿ ಬೆಳೆಯಬೇಕಾದರೆ ಬಹುಜನ ಸಮಾಜ ಪಕ್ಷಕ್ಕೆ ಬೆಂಬಲಿಸಬೇಕು’ ಎಂದು ಒತ್ತಾಯಿಸಿದರು.
ಪಕ್ಷದ ರಾಜ್ಯ ಕಾರ್ಯದರ್ಶಿ ದತ್ತು ಸೂರ್ಯವಂಶಿ,‘ಹಿಂದುಳಿದ ವರ್ಗಗಳ ಜನರ ಕಲ್ಯಾಣಕ್ಕಾಗಿ ಬಹುಜನ ಸಮಾಜ ಪಕ್ಷ ಶ್ರಮಿಸುತ್ತದೆ . ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದೇಶದ ಅಭಿವೃದ್ಧಿ ಬಿಟ್ಟು ಹಿಂದೂ ಮುಸ್ಲಿಂ ಸಮುದಾಯಗಳ ನಡುವೆ ಜಗಳ ಹೆಚ್ಚುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಅವರು ಕೇವಲ ದೇವಸ್ಥಾನಗಳ ಬಗ್ಗೆ ಮಾತನಾಡುತ್ತಾರೆ. ಆದರೆ ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ. ಹೀಗಾಗಿ ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಬಹುಜನ ಸಮಾಜ ಪಕ್ಷಕ್ಕೆ ಬೆಂಬಲ ನೀಡಬೇಕು’ ಎಂದು ಹೇಳಿದರು.
ಯಹೋನ್ ಡಿಸೋಸಾ, ಜಿಲ್ಲಾ ಉಪಾಧ್ಯಕ್ಷ ಅಶೋಕ್ ಮಂಠಾಳಕರ್, ಅಕ್ಸರ್ ಸೇರಿದಂತೆ ಇತರರು ಪತ್ರಿಕಾಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.