ADVERTISEMENT

ಬೀದರ್: ಗುಣಮಟ್ಟದ ಶಿಕ್ಷಣವೇ ಸಂಘದ ಧ್ಯೇಯ

ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಟೆಕ್ನೊತ್ಸವ

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 12:54 IST
Last Updated 25 ಜೂನ್ 2022, 12:54 IST
ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು
ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು   

ಬೀದರ್: ‘ಗುಣಮಟ್ಟದ ಶಿಕ್ಷಣವೇ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಧ್ಯೇಯ’ ಎಂದು ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ನಿರ್ದೇಶಕ ಶರಣಬಸಪ್ಪ ದೇಶಮುಖ ಹೇಳಿದರು.

ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಟೆಕ್ನೋತ್ಸವ-ಯುಕ್ತಿ-2022 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ಹಾಗೂ ಶರಣಬಸವೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಹಾಗೂ ಗುಣಾತ್ಮಕ ಶಿಕ್ಷಣ ಕೊಡಲಾಗುತ್ತಿದೆ. ಪರಿಣಾಮವಾಗಿ, ಪ್ರತಿವರ್ಷ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ದೊರಕುತ್ತಿದೆ ಎಂದು ಹೇಳಿದರು.

ADVERTISEMENT

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಶರಣಬಸವಪ್ಪ ಅಪ್ಪ, ಮಾತೋಶ್ರೀ ದಾಕ್ಷಾಯಣಿ, ಚಿ. ದೊಡ್ಡಪ್ಪ ಅಪ್ಪ, ಕಾರ್ಯದರ್ಶಿ ಬಸವರಾಜ ದೇಶಮುಖ ಹಾಗೂ ನಿರ್ದೇಶಕ ಶರಬಸಪ್ಪ ದೇಶಮುಖ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕಾಲೇಜಿನಲ್ಲಿ ಎಲ್ಲ ರೀತಿಯ ಸೌಕರ್ಯಗಳನ್ನು ಕಲ್ಪಿಸಿದ್ದಾರೆ. ವಿದ್ಯಾರ್ಥಿಗಳು ಅವುಗಳ ಪ್ರಯೋಜನ ಪಡೆದು ಶೈಕ್ಷಣಿಕ ಅಭಿವೃದ್ಧಿ ಸಾಧಿಸಬೇಕು ಎಂದು ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯೆ ಡಾ. ವಿನಿತಾ ಪಾಟೀಲ ತಿಳಿಸಿದರು.

ಬಿ.ವಿ.ಬಿ. ಕಾಲೇಜು ಪ್ರಾಚಾರ್ಯ ಡಾ. ಪಿ.ವಿ. ರೆಡ್ಡಿ ಮಾತನಾಡಿದರು. ಶರಣಬಸವೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಸತೀಶ ಪ್ರತಾಪುರ, ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.