ADVERTISEMENT

ಬೀದರ್‌: ಕ್ವಾರಿ ಕಾರ್ಮಿಕರ ಸಂಘದ ಸಮಾವೇಶ

​ಪ್ರಜಾವಾಣಿ ವಾರ್ತೆ
Published 14 ಜುಲೈ 2021, 16:38 IST
Last Updated 14 ಜುಲೈ 2021, 16:38 IST

ಬೀದರ್‌: ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಮಟ್ಟದ ಮೂರನೇ ಸಮಾವೇಶ ನಡೆಯಿತು.

ನಿಜವಾದ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಕಿಟ್‌ಗಳು ದೊರಕುತ್ತಿಲ್ಲ. ಕಾರ್ಮಿಕರಲ್ಲದವರು ಸುಳ್ಳು ದಾಖಲೆಗಳನ್ನು ಒದಗಿಸಿ ಆಹಾರಧಾನ್ಯದ ಕಿಟ್‌ ಪಡೆದುಕೊಳ್ಳುತ್ತಿದ್ದಾರೆ ಎಂದು ಮುಖಂಡರು ಆರೋಪಿಸಿದರು.

ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ಅರ್ಹರಿಗೆ ಕಿಟ್‌ ವಿತರಿಸುವ ಕೆಲಸವನ್ನು ಮಾಡಬೇಕು. ಕಾರ್ಮಿಕ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಿದರೆ ಅನರ್ಹರು ಸರ್ಕಾರದ ಸೌಲಭ್ಯ ಪಡೆಯುವುದನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಹೇಳಿದರು.

ADVERTISEMENT

ಕೆಲವರು ಕಾರ್ಮಿಕ ಸಂಘಗಳನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯ ಮಟ್ಟದ ಕೆಲ ಅಧಿಕಾರಿಗಳು ಶಾಮೀ ಲಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಸಂಘಟನೆ ಪದಾಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವ ಅಗತ್ಯವಿದೆ ಎಂದು ತಿಳಿಸಿದರು.

ಸಭೆಯಲ್ಲಿ ಕಾರ್ಮಿಕರ ಹಲವು ಸಮಸ್ಯೆಗಳ ಕುರಿತು ಸುಧೀರ್ಘವಾಗಿ ಚರ್ಚಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.