ADVERTISEMENT

ಶೀಘ್ರ ಬೆಂಬಲ ಬೆಲೆ ಖರೀದಿ ಕೇಂದ್ರ: ಸಚಿವ ಭರವಸೆ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2020, 15:07 IST
Last Updated 1 ಸೆಪ್ಟೆಂಬರ್ 2020, 15:07 IST
ಭಗವಂತ ಖೂಬಾ
ಭಗವಂತ ಖೂಬಾ   

ಬೀದರ್: ಕೇಂದ್ರದಿಂದ ಅನುಮತಿ ದೊರೆತ ಕೂಡಲೇ ಜಿಲ್ಲೆಯಲ್ಲಿ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಭರವಸೆ ನೀಡಿದ್ದಾರೆ ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸಚಿವರನ್ನು ಭೇಟಿ ಮಾಡಿ ಖರೀದಿ ಕೇಂದ್ರದ ಕುರಿತು ಚರ್ಚಿಸಲಾಗಿದೆ. ಈಗಾಗಲೇ ರಾಜ್ಯದಿಂದ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಖರೀದಿ ಕೇಂದ್ರ ಶುರು ಮಾಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆಯನ್ನೂ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ ಎಂದು ಹೇಳಿದ್ದಾರೆ.

ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಖರೀದಿ ಕೇಂದ್ರಗಳಲ್ಲೇ ಮಾರಾಟ ಮಾಡುವ ಮೂಲಕ ಕನಿಷ್ಠ ಬೆಂಬಲ ಬೆಲೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

ರೈತರ ಆದಾಯ ದ್ವಿಗುಣಗೊಳಿಸುವ ದಿಸೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಕನಿಷ್ಠ ಬೆಂಬಲ ಬೆಲೆಯೂ ಸೇರಿದೆ. ಈಗಾಗಲೇ ಜಿಲ್ಲೆಯ ಲಕ್ಷಾಂತರ ರೈತರು ಇದರ ಲಾಭ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.