
ಗೋರನಳ್ಳಿ (ಜನವಾಡ): ‘ನಾಯಿ ಕಚ್ಚಿದರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರಬಾರದು. ಕೂಡಲೇ ರೇಬಿಸ್ ರೋಗ ನಿರೋಧಕ ಚುಚ್ಚು ಮದ್ದು ಪಡೆಯಬೇಕು’ ಎಂದು ಮುಖ್ಯ ಪಶು ವೈದ್ಯಾಧಿಕಾರಿ ಡಾ.ಸಮುದ್ರ ಕುಲಕರ್ಣಿ ಹೇಳಿದರು.
ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ನಡೆದ ರೇಬಿಸ್ ರೋಗ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ರೇಬಿಸ್ ರೋಗವು ಸೋಂಕಿತ ಪ್ರಾಣಿಯಿಂದ ಮನುಷ್ಯನಿಗೆ ಹರಡುತ್ತದೆ’ ಎಂದು ತಿಳಿಸಿದರು.
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ನಿರ್ದೇಶಕ ಯೋಗೇಂದ್ರ ಕುಲಕರ್ಣಿ ಹಾಗೂ ಕಾಲೇಜು ನಿರ್ದೇಶಕಿ ಉಮಾ ದೇಶಮುಖ ರೇಬಿಸ್ ರೋಗದ ಲಕ್ಷಣ ಹಾಗೂ ಲಸಿಕೆ ಕುರಿತು ಮಾತನಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ ನೀರಗುಡಿ, ಮುಖ್ಯ ಪಶು ವೈದ್ಯಾಧಿಕಾರಿ ಡಾ.ಬಸವರಾಜ ಮುಚಳಂಬೆ, ಪ್ರಾಚಾರ್ಯೆ ವಿನಿತಾ ಪಾಟೀಲ, ಪ್ರೊ.ಸಂದೀಪ್ ಮಾಶೆಟ್ಟಿ ಇದ್ದರು.
ಎನ್.ಎಸ್.ಎಸ್. ಅಧಿಕಾರಿ ಬಸವಲಿಂಗ ಸ್ವಾಮಿ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.