ADVERTISEMENT

45 ಅಂಗಡಿಗಳ ಮೇಲೆ ದಾಳಿ

ಮಾದಕ ವಸ್ತುಗಳ ಮಾರಾಟ ಮಾಡದಂತೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2019, 15:23 IST
Last Updated 21 ನವೆಂಬರ್ 2019, 15:23 IST
ಬೀದರ್‌ನಲ್ಲಿ ಗುರುವಾರ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿ ಅಂಗಡಿಯೊಂದರ ಮೇಲೆ ದಾಳಿ ನಡೆಸಿ ತಂಬಾಕು ಉತ್ಪನ್ನಗಳನ್ನು ಪರಿಶೀಲಿಸಿದರು
ಬೀದರ್‌ನಲ್ಲಿ ಗುರುವಾರ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿ ಅಂಗಡಿಯೊಂದರ ಮೇಲೆ ದಾಳಿ ನಡೆಸಿ ತಂಬಾಕು ಉತ್ಪನ್ನಗಳನ್ನು ಪರಿಶೀಲಿಸಿದರು   

ಬೀದರ್‌: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ನಗರಸಭೆ ಸಿಬ್ಬಂದಿ ಮತ್ತು ಪೊಲೀಸರು ಗುರುವಾರ ಜಂಟಿಯಾಗಿ ನಗರ ವ್ಯಾಪ್ತಿಯ 45 ಅಂಗಡಿಗಳ ಮೇಲೆ ದಾಳಿ ನಡೆಸಿ ₹ 4,500 ದಂಡ ವಿಧಿಸಿದ್ದಾರೆ.

ಅಂಗಡಿಗಳಲ್ಲಿ ಕೇಂದ್ರ ಸರ್ಕಾರ ನಿಷೇಧಿಸಿದ ಎಲೆಕ್ಟಾನಿಕ್ ಸಿಗರೇಟ್‍ಗಳನ್ನು ಮಾರಾಟ ಮಾಡುವಂತಿಲ್ಲ ಎಂದು ನಗರದ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದರು.

‘ಎಲೆಕ್ಟಾನಿಕ್ ಸಿಗರೇಟ್ ಹಾಗೂ ಮಾದಕ ವಸ್ತುಗಳ ಬಳಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.
ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಎಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅಧಿಕಾರಿ ಡಾ.ಕೃಷ್ಣಾ ರೆಡ್ಡಿ ತಿಳಿಸಿದರು.

ADVERTISEMENT

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಸಲಹೆಗಾರರಾದ ಪ್ರಕಾಶ ವಗ್ಗೆ, ಶಂಭು ಕಡ್ಲಿಕೊಪ್ಪ, ಅರುಣ ಪಾಟೀಲ, ಜಿಲ್ಲಾ ಸರ್ವೇಕ್ಷಣಾ ಘಟಕದ ಹಿರಿಯ ಆರೋಗ್ಯ ಸಹಾಯಕ ಅಬ್ರಾಹಂ, ನಗರ ಸಭೆಯ ಹಫೀಜ್, ಸಂಗಮೇಶ ಹಾಗೂ ಪೊಲೀಸ್ ಕಾನ್‌ಸ್ಟಬಲ್‌ ದಾಳಿಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.