ADVERTISEMENT

ಬೀದರ್‌: ರಾಯರ ಆರಾಧನಾ ಮಹೋತ್ಸವಕ್ಕೆ ತೆರೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2025, 15:23 IST
Last Updated 12 ಆಗಸ್ಟ್ 2025, 15:23 IST
   

ಬೀದರ್‌: ಮೂರು ದಿನಗಳ ರಾಘವೇಂದ್ರ ಗುರು ಸಾರ್ವಭೌಮರ 354ನೇ ಆರಾಧನಾ ಮಹೋತ್ಸವಕ್ಕೆ ಮಂಗಳವಾರ ಸಂಜೆ ವಿದ್ಯುಕ್ತ ತೆರೆ ಬಿತ್ತು.

ಮಂಗಳವಾರ ಉತ್ತರಾಧನೆ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಗಳು ಜರುಗಿದವು. ರಾಯರ ರಥೋತ್ಸವದಲ್ಲಿ ಭಕ್ತಿಯಿಂದ ಭಕ್ತರು ಮಿಂದೆದ್ದರು. ಶ್ರದ್ಧಾ, ಭಕ್ತಿಯಿಂದ ಕುಣಿದು ಕುಪ್ಪಳಿಸಿದರು.

ನಗರದ ರಾಘವೇಂದ್ರ ಸ್ವಾಮಿ ಮಂದಿರದಲ್ಲಿ ಮಂಗಳವಾರ ಬೆಳಿಗ್ಗೆ ಸುಪ್ರಭಾತ, ವಿಷ್ಣು ಸಹಸ್ರನಾಮ, ಅಷ್ಟೋತ್ತರ ಪಾರಾಯಣ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ ನಡೆಯಿತು. ರಾಯರ ವೃಂದಾವನಕ್ಕೆ ಕೇಸರಿ, ಬಿಳಿ, ಹಸಿರು ಬಣ್ಣದ ಹೂ ಹಾಗೂ ತುಳಸಿ ಎಲೆಗಳಿಂದ ಅಲಂಕರಿಸಲಾಗಿತ್ತು. ಮಧ್ಯಾಹ್ನ ರಥೋತ್ಸವ ಜರುಗಿತು. ಮಹಾಪ್ರಸಾದದ ನಂತರ ಭಜನೆ, ಸಂಗೀತ ದರ್ಬಾರ್‌ ಕಾರ್ಯಕ್ರಮ ಜರುಗಿತು.

ADVERTISEMENT

ಪೂರ್ವಾರಾಧನೆ, ಮಧ್ಯಾರಾಧನೆ ಹಾಗೂ ಉತ್ತರಾಧನೆಯ ಎಲ್ಲ ಕಾರ್ಯಕ್ರಮಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಭಾಗಗಳಿಂದ ಬ್ರಾಹ್ಮಣ ಸಮಾಜದವರು ಮಂದಿರಕ್ಕೆ ತೆರಳಿ ದೇವರ ದರ್ಶನ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.