ADVERTISEMENT

ಕಾಯ್ದೆ ಉಲ್ಲಂಘನೆ: 87 ಪ್ರಕರಣ ದಾಖಲು

ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 3:58 IST
Last Updated 22 ಸೆಪ್ಟೆಂಬರ್ 2021, 3:58 IST
ಬೀದರ್‌ನಲ್ಲಿ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು
ಬೀದರ್‌ನಲ್ಲಿ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು   

ಬೀದರ್: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ನಗರಸಭೆ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ನಗರದ ವಿವಿಧೆಡೆ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿದರು.

ಕೋಟ್ಪಾ ಕಾಯ್ದೆ–2003 ಉಲ್ಲಂಘಿಸಿದ 87 ಅಂಗಡಿಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ, ಒಟ್ಟು ₹ 7,900 ದಂಡ ವಿಧಿಸಿದರು. ಸಾರ್ವಜನಿಕರಿಗೆ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ತಿಳಿವಳಿಕೆ ನೀಡಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅಧಿಕಾರಿ ಡಾ. ಕೃಷ್ಣಾರೆಡ್ಡಿ, ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕ ಮಹಾಂತೇಶ ಬಿ. ಉಳ್ಳಾಗಡ್ಡಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಸಲಹೆಗಾರ ಪ್ರಕಾಶ ವಗ್ಗೆ, ಮಹೇಶ ಬಬಛಡೆ, ಓಂಕಾರ ಮಳಗೆ, ಪೊಲೀಸ್ ಕಾನ್‍ಸ್ಟೆಬಲ್‍ಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.