ADVERTISEMENT

ಮಳೆ ಹಾನಿ: ₹ 58.87 ಕೋಟಿ ಇನ್‍ಪುಟ್ ಸಬ್ಸಿಡಿ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2021, 13:27 IST
Last Updated 25 ಡಿಸೆಂಬರ್ 2021, 13:27 IST
ವಿಜಯಸಿಂಗ್
ವಿಜಯಸಿಂಗ್   

ಬೀದರ್: ಬೀದರ್ ಜಿಲ್ಲೆಯಲ್ಲಿ ಜುಲೈನಿಂದ ಸೆಪ್ಟೆಂಬರ್ ವರೆಗಿನ ಅವಧಿಯಲ್ಲಿ ಸುರಿದ ಭಾರಿ ಮಳೆಯಿಂದ ಬೆಳೆ ಹಾನಿಗೊಳಗಾದ 1,01,569 ರೈತರಿಗೆ ಒಟ್ಟು ₹ 58.87 ಕೋಟಿ ಇನ್‍ಪುಟ್ ಸಬ್ಸಿಡಿ ಒದಗಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, ಸರ್ಕಾರದಿಂದ ನೇರವಾಗಿ ರೈತರ ಖಾತೆಗೆ ಸಬ್ಸಿಡಿ ಹಣ ಜಮೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಜುಲೈನಿಂದ ಸೆಪ್ಟೆಂಬರ್‌ ವರೆಗೆ ಸುರಿದ ಭಾರಿ ಮಳೆಗೆ ಜಿಲ್ಲೆಯಲ್ಲಿ ಉದ್ದು, ಹೆಸರು, ತೊಗರಿ, ಸೋಯಾಬೀನ್, ಕಬ್ಬು ಸೇರಿದಂತೆ 1,61,122 ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ಔರಾದ್ ತಾಲ್ಲೂಕಿನಲ್ಲಿ 38,716 ಹೆಕ್ಟೇರ್, ಕಮಲನಗರ 35,942 ಹೆಕ್ಟೇರ್, ಬೀದರ್ 21,502 ಹೆಕ್ಟೇರ್, ಭಾಲ್ಕಿ 38,711 ಹೆಕ್ಟೇರ್, ಬಸವಕಲ್ಯಾಣ 9,677 ಹೆಕ್ಟೇರ್, ಹುಲಸೂರು 4,650 ಹೆಕ್ಟೇರ್, ಹುಮನಾಬಾದ್ 6,611 ಹೆಕ್ಟೇರ್ ಹಾಗೂ ಚಿಟಗುಪ್ಪ ತಾಲ್ಲೂಕಿನಲ್ಲಿ 4,782 ಹೆಕ್ಟೇರ್ ಬೆಳೆ ನಷ್ಟ ಉಂಟಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.