ADVERTISEMENT

ಬೀದರ್‌ ಜಿಲ್ಲೆಯಾದ್ಯಂತ ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2024, 12:23 IST
Last Updated 15 ಜುಲೈ 2024, 12:23 IST
   

ಬೀದರ್‌: ಜಿಲ್ಲೆಯಾದ್ಯಂತ ಸೋಮವಾರ ಉತ್ತಮ ಮಳೆಯಾಗಿದೆ.

ಭಾನುವಾರ ಸಂಜೆಯಿಂದ ತಡರಾತ್ರಿವರೆಗೆ ಸುರಿದ ಮಳೆ ಸೋಮವಾರ ಮಧ್ಯಾಹ್ನ 12ರ ವರೆಗೆ ಬಿಡುವು ಕೊಟ್ಟಿತ್ತು. ಬಳಿಕ ಆರಂಭಗೊಂಡ ಜಿಟಿಜಿಟಿ ಮಳೆ ಸಂಜೆ ಐದು ಗಂಟೆಯ ವರೆಗೆ ಸುರಿಯಿತು. ಇದರಿಂದ ವಾತಾವರಣ ಸಂಪೂರ್ಣ ತಂಪಾಗಿ ಜನಜೀವನ ಅಸ್ತವ್ಯಸ್ತಗೊಂಡಿತು.

ಪ್ರಮುಖ ರಸ್ತೆಗಳಲ್ಲಿ ಅಪಾರ ನೀರು ಸಂಗ್ರಹಗೊಂಡು ವಾಹನಗಳ ಸಂಚಾರ ನಿಧಾನಗೊಂಡಿತು. ನಗರದ ಬೊಮ್ಮಗೊಂಡೇಶ್ವರ ವೃತ್ತ ಸಮೀಪದ ರೈಲ್ವೆ ಅಂಡರ್‌ಪಾಸ್‌ನಲ್ಲಿ ಹೆಚ್ಚಿನ ನೀರು ಸಂಗ್ರಹಗೊಂಡಿದ್ದರಿಂದ ವಾಹನಗಳ ಸಂಚಾರಕ್ಕೆ ತೊಡಕಾಯಿತು.

ADVERTISEMENT

ಸತತ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಗೆ ರೈತರು ಸಂತಸಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.