ADVERTISEMENT

ಬೀದರ್‌ನಲ್ಲಿ ಉತ್ತಮ ಮಳೆ

ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರು: ಸಂಚಾರ ಅಸ್ತವ್ಯಸ್ತ

​ಪ್ರಜಾವಾಣಿ ವಾರ್ತೆ
Published 31 ಮೇ 2020, 16:50 IST
Last Updated 31 ಮೇ 2020, 16:50 IST
ಕಮಲನಗರದಲ್ಲಿ ಮಳೆ ನೀರು ಮನೆಗೆ ನುಗ್ಗಿರುವುದು
ಕಮಲನಗರದಲ್ಲಿ ಮಳೆ ನೀರು ಮನೆಗೆ ನುಗ್ಗಿರುವುದು   

ಕಮಲನಗರ: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಭಾನುವಾರ ಸಂಜೆ ಭಾರಿ ಗುಡುಗು ಸಹಿತ ಮಳೆ ಸುರಿಯಿತು.

ರಸ್ತೆ, ಚರಂಡಿಗಳು ಸಂಪೂರ್ಣ ಜಲಾವೃತಗೊಂಡವು. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿತು. ಸುಗಮ ಸಂಚಾರಕ್ಕೆ ಅಡ್ಡಿ ಉಂಟಾಯಿತು.

ಮಳೆಯಿಂದ ಮುಂಗಾರು ಹಂಗಾಮಿನ ಬಿತ್ತನೆಗೆ ಅನುಕೂಲವಾಗಿದೆ. ರೈತರು ಸೋಯಾ ಬಿತ್ತನೆಗೆ ಭೂಮಿ ಹದಗೊಳಿಸುತ್ತಿದ್ದಾರೆ.

ADVERTISEMENT

ತಾಲ್ಲೂಕಿನ ದಾಬಕಾ ಚಕ್ಲಿ, ತೋರ್ಣಾ, ಬಸನಾಳ ಗ್ರಾಮದ ಚರಂಡಿ ನೀರು ರಸ್ತೆ ಮೇಲೆ ಹರಿಯಿತು.

ಮಳೆಯಿಂದ ಪಟ್ಟಣದ ತಹಶೀಲ್ದಾರ್ ಕಚೇರಿ, ಬಿಇಒ ಕಚೇರಿ, ಎಪಿಎಂಸಿ ಆವರಣ ಸೇರಿ ಸರ್ಕಾರಿ ಕಚೇರಿಗಳ ಅಂಗಳಕ್ಕೆ ನೀರು ನುಗ್ಗಿ ಕೆರೆಯಾಗಿ ಮಾರ್ಪಟ್ಟವು.

ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ನೀರು ರಸ್ತೆ ಮೇಲೆ ಹರಿದು ಜನರಿಗೆ ತೊಂದರೆಯಾಗಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಮಹಾದೇವ ಬಿರಾದಾರ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.