ADVERTISEMENT

ಬೀದರ್ ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2021, 14:11 IST
Last Updated 17 ಜುಲೈ 2021, 14:11 IST
ಬೀದರ್‌ನ ಜನವಾಡ ರಸ್ತೆಯಲ್ಲಿ ಶನಿವಾರ ಜೋರಾಗಿ ಸುರಿದ ಮಳೆಯಲ್ಲೇ ಸಾಗಿದ ವಾಹನ / ಚಿತ್ರ: ಗುರುಪಾದಪ್ಪ ಸಿರ್ಸಿ
ಬೀದರ್‌ನ ಜನವಾಡ ರಸ್ತೆಯಲ್ಲಿ ಶನಿವಾರ ಜೋರಾಗಿ ಸುರಿದ ಮಳೆಯಲ್ಲೇ ಸಾಗಿದ ವಾಹನ / ಚಿತ್ರ: ಗುರುಪಾದಪ್ಪ ಸಿರ್ಸಿ   

ಬೀದರ್: ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಶನಿವಾರ ಸಂಜೆ ಮಳೆ ಅಬ್ಬರಿಸಿದೆ. ಚಿಟಗುಪ್ಪ, ಬೀದರ್‌, ಹುಮನಾಬಾದ್‌ ಹಾಗೂ ಬಸವಕಲ್ಯಾಣ ತಾಲ್ಲೂಕಿನಲ್ಲಿ ಮಳೆಯಾಗಿದೆ.

ಬೆಳಿಗ್ಗೆಯಿಂದ ಬಿಸಿಲು ಮಿಶ್ರಿತ ಮೋಡ ಕವಿದ ವಾತಾವರಣ ಇತ್ತು. ಸಂಜೆ ದಟ್ಟ ಮೋಡ ಕವಿದು ಮಳೆ ಸುರಿದಿದೆ. ಚಿಟಗುಪ್ಪದಲ್ಲಿ ಜೋರಾಗಿ ಸುರಿದ ಮಳೆಗೆ ಗಟಾರುಗಳು ಉಕ್ಕಿ ಹರಿದವು. ಜನ ಜೀವನ ಅಸ್ತವ್ಯಸ್ತಗೊಂಡಿತ್ತು.

ಬೀದರ್‌ ನಗರದಲ್ಲಿ ಮಳೆ ಅಬ್ಬರಿಸಿದರೆ, ಗ್ರಾಮೀಣ ಪ್ರದೇಶದಲ್ಲಿ ಸಾಧಾರಣ ಮಳೆಯಾಗಿದೆ.ಜಿಲ್ಲೆಯ ಇನ್ನುಳಿದ ತಾಲ್ಲೂಕುಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಬಸವಕಲ್ಯಾಣ ತಾಲ್ಲೂಕಿನ ಹಣಮಂತವಾಡಿಯಲ್ಲಿ 64.5 ಮಿ.ಮೀ. ಮಳೆ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.